ಪೊಲೀಸ್ ಇಲಾಖೆಯಲ್ಲಿ 218 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಪೊಲೀಸ್ ಇಲಾಖೆಯಲ್ಲಿ 218 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಬೆಂಗಳೂರು, ಜೂನ್. 8, ನ್ಯೂಸ್ ಎಕ್ಸ್ ಪ್ರೆಸ್: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (ಕೆಎಸ್ಪಿ) ನೇಮಕಾತಿ 218 ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಆಸಕ್ತ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಜೂನ್ 24,2019 ರೊಳಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ / 10 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಕನಿಷ್ಟ 18 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು ಸಾಮಾನ್ಯ ಮತ್ತು ಓಬಿಸಿ (2ಎ,2ಬಿ,3ಎ ಮತ್ತು 3ಬಿ) ಅಭ್ಯರ್ಥಿಗಳು 250/-ರೂ ಮತ್ತು ಪರಿಶಿಷ್ಟ ಜಾತಿ ,ಪರಿಶಿಷ್ಟ ಪಂಗಡ,ಪ್ರವರ್ಗ-1ರ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಜೂನ್ 27,2019 ರೊಳಗೆ ಪಾವತಿಸಬಹುದು.

 

ಫ್ರೆಶ್ ನ್ಯೂಸ್

Latest Posts

Featured Videos