ಪೋಲೀಸರ ಭರ್ಜರಿ ಕಾರ್ಯಾಚರಣೆ

ಪೋಲೀಸರ ಭರ್ಜರಿ ಕಾರ್ಯಾಚರಣೆ

ಶಿವಮೊಗ್ಗ, ಡಿ. 3 : ಸಾಗರ ತಾಲೂಕಿನ ಪೇಟೆ ಪೋಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಸಾಗರ, ಶಿವಮೊಗ್ಗ ವ್ಯಾಪ್ತಿಯ ಹಲವು ಬೈಕ್ ಕಳ್ಳತನ ಪ್ರಕರಣಗಳು ಪತ್ತೆಯಾಗಿದೆ.
ಜಾವ ವರದಹಳ್ಳಿ ಸರ್ಕಲ್ ಬಳಿ ವಾಹನ ತಪಾಸಣೆ ವೇಳೆ ಅನುಮಾನದ ಮೇರೆಗೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಗಳು ತಾಜುದ್ಧೀನ್ (22), ಅರ್ಷದ್ (28) ಎಂದು ಗುರುತಿಸಲಾಗಿದ್ದು, ಇವರಿಬ್ಬರೂ ಶಿವಮೊಗ್ಗದ ನಿವಾಸಿಗಳಾಗಿದ್ದಾರೆ. ಆರೋಪಿಗಳಿಂದ ಸಾಗರ ವ್ಯಾಪ್ತಿಯಲ್ಲಿ 1 ಕಾರು 3 ಬೈಕ್ ಕಳ್ಳತನ, ಶಿವಮೊಗ್ಗ ವ್ಯಾಪ್ತಿಯಲ್ಲಿ 4 ಬೈಕ್ ಕಳ್ಳತನ ಪ್ರಕರಣ ಪತ್ತೆಯಾಗಿದೆ. ಒಟ್ಟು 8 ಪ್ರಕರಣಗಳು 16,40,000 ರೂ.ಮೌಲ್ಯದ ವಸ್ತುಗಳು ವಶಪಡಿಸಿಕೊಳ್ಳಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos