ಪೊಲೀಸ್ ಠಾಣೆಯಲ್ಲೇ ಸೀಮಾಂತ

ಪೊಲೀಸ್ ಠಾಣೆಯಲ್ಲೇ ಸೀಮಾಂತ

ಬೆಂಗಳೂರು, ಜ. 31 : ಪೊಲೀಸರೆಂದರೆ ದಿನದ 24 ಗಂಟೆಯೂ ಕೆಲಸ ಮಾಡುವವರು. ಇಂತವರಿಗೆ ಸಮಯವೇ ಇರುವುದಿಲ್ಲ. ಇದರ ನಡುವೆಯೂ ಮಹಿಳಾ ಪೇದೆಗಳಿಗೆ ಠಾಣೆಯಲ್ಲೇ ಸೀಮಂತ ಮಾಡಿದ ಅಪರೂಪದ ಪ್ರಸಂಗವೊಂದು ನಡೆದಿದೆ. ಗರ್ಭಿಣಿಯರಿಗೆ ಪೊಲೀಸ್ ಠಾಣೆಯಲ್ಲಿ ಸೀಮಂತ ಮಾಡಿದ್ದಾರೆ. ಪೊಲೀಸರು ಗರ್ಭಿಣಿ ಸಿಬ್ಬಂದಿಗೆ ಆರೋಗ್ಯಕರ ವಾತಾವರಣ ನಿರ್ಮಾಣ ಮಾಡುವ ಪ್ರಯತ್ನ ಮಾಡಿದ್ದು, ಠಾಣೆಯ ಎಲ್ಲಾ ಸಿಬ್ಬಂದಿ ಸೇರಿ ಶಾಸ್ತ್ರೋಕ್ತವಾಗಿ ಸೀಮಂತ ನೆರವೇರಿಸಿದ್ದಾರೆ.

ಠಾಣೆಯ ಮಹಿಳಾ ಪೊಲೀಸ್ ಪೇದೆಯಾಗಿದ್ದ ಲಕ್ಷ್ಮೀ ಹಾಗೂ ಮತ್ತೊಬ್ಬ ಮಹಿಳಾ ಪೇದೆ ವೀರಮ್ಮ ಅವರಿಗೆ ಸೀಮಂತ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಮಹಿಳಾ ಸಿಬ್ಬಂದಿಗೆ ಕೆಲಸದ ಒತ್ತಡ, ಮಾನಸಿಕ ಒತ್ತಡ ಜಾಸ್ತಿ ಇರುತ್ತೆ. ಹೀಗಾಗಿ ಮಾನಸಿಕ ಒತ್ತಡ ಕಡಿಮೆ ಮಾಡಲು ಗರ್ಭಿಣಿ ಮಹಿಳಾ ಸಿಬ್ಬಂದಿಗೆ ಸೀಮಂತ ಮಾಡಿರೋದು ನಿಜಕ್ಕೂ ಹೆಮ್ಮೆಪಡುವ ವಿಚಾರ ಎಂದು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos