ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಪಾಲಿಸಿ: ಕಾರಜೋಳ

ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರದ ನಿರ್ದೇಶನಗಳನ್ನು ಪಾಲಿಸಿ: ಕಾರಜೋಳ

ಬಾಗಲಕೋಟೆ, ಮಾ. 28:  ಕೊರೊನಾ ನಿಯಂತ್ರಣಕ್ಕಾಗಿ ಸರ್ಕಾರ ಹಾಗೂ ಜಿಲ್ಲಾಡಳಿತದ‌ ಸಲಹೆ ಸೂಚನೆಗಳನ್ನು ಸಾರ್ವಜನಿಕರು  ಪಾಲಿಸಿ ತಮ್ಮ ತಮ್ಮ  ಕುಟುಂಬ ಪರಿವಾರದ ಆರೋಗ್ಯ ರಕ್ಷಣೆಗಾಗಿ ಸಹಕರಿಬೇಕು ಎಂದು ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ಮನವಿ ಮಾಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಇಂದು ಅಧಿಕಾರಿಗಳೊಂದಿಗೆ ಕೊರೊನಾ ಕುರಿತು ಸಭೆ ನಡೆಸಿದ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ 4ಚೆಕ್ ಪೋಸ್ಟ್ ಗಳನ್ನು ತೆರೆಯಲಾಗಿದ್ದು, ದಿನದ 24ಗಂಟೆ ಚೆಕ್ ಪೋಸ್ಟ್ ಗಳು ಕಾರ್ಯನಿರ್ವಹಿಸುತ್ತಿವೆ. 16,929 ವಾಹನಗಳಲ್ಲಿ ಪ್ರಯಾಣಿಸುತ್ತಿದ್ದ. 91717 ಜನರನ್ನು ತಪಾಸಣೆ ಮಾಡಲಾಗಿದೆ.  ಜಿಲ್ಲೆಗೆ ವಿದೇಶಗಳಿಂದ ಹಿಂದುರಿಗಿದ 165 ಜನರನ್ನು ಹೋಮ್ ಕ್ವಾರಂಟೈನ್ ನಲ್ಲಿಡಲಾಗಿದೆ.10 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಎಲ್ಲಾ ಮಾದರಿಗಳು ನೆಗಿಟಿವ್ ಆಗಿರುತ್ತದೆ. ಬಾಗಲಕೋಟೆ ನಗರದಲ್ಲಿರುವ ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯ ದಲ್ಲಿ 12ಬೆಡ್ ಗಳ ಐಸೊಲೇಷನ್ ವಾರ್ಡ್ ತೆರೆಯಲಾಗಿದೆ. ಜಿಲ್ಲೆಯಲ್ಲಿ 12 ಫೀವರ್ ಕ್ಲೀನಿಕ್ ಗಳನ್ನು ತೆರೆಯಲಾಗಿದೆ. 11 ವೆಂಟಿಲೇಟರ್ ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. 3 ತಾತ್ಕಾಲಿಕ ಹಾಸ್ಟಲ್ ಗಳನ್ನು ಗುರುತಿಸಿ, ಅದರಲ್ಲಿ ಎಸ್ ಐಸಿ ಗಳನ್ನು ತೆರೆಯಲಾಗಿದೆ. ಜಿಲ್ಲೆಯಲ್ಲಿ ಎಲ್ಲಾ ಐತಿಹಾಸಿಕ ಪ್ರವಾಸಿ ತಾಣಗಳು, ಧಾರ್ಮಿಕ ಕೇಂದ್ರಗಳನ್ನು ಸಂಪೂರ್ಣ ಬಂದ್ ಮಾಡಲಾಗಿದೆ.

ಕಲಂ 144 ಜಾರಿಗೊಳಿಸಲಾಗಿದೆ. ಸರಕು ಸಾಗಾಣಿಕೆ ವಾಹನಗಳ ಮಾಲೀಕರ ಜೊತೆಗೆ ಸಭೆ ನಡೆಸಿ ಅವಶ್ಯಕ ಸಾಮಗ್ರಿಗಳನ್ನು‌ ಮಾತ್ರ ಪೂರೈಕೆ ಮಾಡುವಂತೆ ಸೂಚಿಸಲಾಗಿದೆ. ಸಾರಿಗೆ ಸೇವೆಯನ್ನು ನಿರ್ಬಂಧಿಸಲಾಗಿದೆ. ಮಾರ್ಚ್ ತಿಂಗಳ ಪಡಿತರವನ್ನು ವಿತರಿಸಲಾಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ 2 ತಿಂಗಳ ಪಡಿತರವನ್ನು ಸಾಮಾಜಿಕ ಅಂತರವನ್ನು ಕಾಯ್ದುಕೊಂಡು  ವಿತರಿಸಲಾಗುವುದು. ಸ್ವಚ್ಚತೆಯನ್ನು ಕಾಪಾಡಿ, ಶುದ್ದ ಕುಡಿಯುವ ನೀರು ಪೂರೈಕೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾ ಆಡಳಿತ ವು  ಕೊರೊನಾ ನಿಯಂತ್ರಣಕ್ಕಾಗಿ  ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಮತ್ತಷ್ಟು ಮುಂಜಾಗ್ರತಾ ಕ್ರಮಗಳನ್ನು‌ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಶಾಸಕರಾದ ಡಾ. ವೀರಣ್ಣ ಚರಂತಿಮಠ, ಸಂಸದರಾದ ಶ್ರೀ ಪಿ.ಸಿ. ಗದ್ದಿಗೌಡರ, ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಜಿ.ಪಂ. ಸಿಇಓ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos