ಬೆಂಗಳೂರು, ಜೂನ್.1, ನ್ಯೂಸ್ ಎಕ್ಸ್ ಪ್ರೆಸ್ : “ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ನಾಲ್ಕು ಶಾಸಕರನ್ನು ಕಳುಹಿಸಿ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಮೇಲ್ನೋಟಕ್ಕೆ ನಮಗೆ ಅನಿಸಿದೆ.ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವ ಸಿದ್ದರಾಮಯ್ಯ ಅವರು 4 ಶಾಸಕರನ್ನು ಮುಂದಾಗಿದ್ದಾರೆ. ಹಾಗಾಗಿ ಪಕ್ಷದ ವರಿಷ್ಠರ ಸೂಚನೆಯಂತೆ ಮೈತ್ರಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವುದಿಲ್ಲ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ದೆಹಲಿಯಿಂದ ವಾಪಸ್ ಆದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೆಲವು ಶಾಸಕರುರನ್ನು ಮುಂದೆ ಬಿಟ್ಟಿರುವ ಸಿದ್ದರಾಮಯ್ಯ ಅವರು ಮೈತ್ರಿಯಲ್ಲಿ ಅತೃಪ್ತಿ ಇದೆ ಎಂದು ನಾಟಕ ವಾಡಿಸುತ್ತಿದ್ದಾರೆ. ಸರ್ಕಾರ ಅಸ್ಥಿರಗೊಳಿಸುವ ಯತ್ನ ಮಾಡದೇ ವಿರೋಧ ಪಕ್ಷದಲ್ಲಿದ್ದುಕೊಂಡು ಕೆಲಸ ಮಾಡಿ ಎಂದು ವರಿಷ್ಠರು ನಿರ್ದೇಶನ ನೀಡಿದ್ದಾರೆ.