ಪೂಜಾ ಗಾಂಧಿ- ಅನಿಲ್ ಮೆಣಸಿನಕಾಯಿ 1 ವರ್ಷ ರೂಂ ಬುಕ್ ಮಾಡಿದ್ದರಂತೆ!

ಪೂಜಾ ಗಾಂಧಿ- ಅನಿಲ್ ಮೆಣಸಿನಕಾಯಿ 1 ವರ್ಷ ರೂಂ ಬುಕ್ ಮಾಡಿದ್ದರಂತೆ!

ಬೆಂಗಳೂರು, ಮಾ.19, ನ್ಯೂಸ್ ಎಕ್ಸ್ ಪ್ರೆಸ್ : ಹೋಟೆಲ್ ಬಿಲ್ ಕಟ್ಟದ ಪೂಜಾ ಗಾಂಧಿ ವಿರುದ್ಧ ದೂರು ದಾಖಲಾದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪೂಜಾಗಾಂಧಿಯವರು ಬಿಜೆಪಿ ಮುಖಂಡನ ಜೊತೆಗೆ ರೂಂ ಬುಕ್ ಮಾಡಿದ್ದರು ಎಂಬ ಮಾಹಿತಿ ಹೊರಬಿದ್ದಿದೆ. ಬೆಂಗಳೂರಿನ ದಿ ಲಲಿತ್ ಅಶೋಕ್ ಹೋಟೆಲ್ನಲ್ಲಿ ನಟಿ ಪೂಜಾ ಗಾಂಧಿ ಹಾಗೂ ಗದಗ ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ 1 ವರ್ಷ ರೂಂ ಬುಕ್ ಮಾಡಿದ್ದರು. ಕಳೆದ 2016 ಏಪ್ರಿಲ್ನಿಂದ ಮಾರ್ಚ್ 2017ರವರೆಗೆ ಬರೋಬ್ಬರಿ 1 ವರ್ಷ ರೂಂ ಬುಕ್ ಮಾಡಿದ್ದರು. ಬಿಜೆಪಿ ಮುಖಂಡನ ಜೊತೆ ವಾಸ್ಯವ್ಯವಿದ್ದ ನಟಿ, 26 ಲಕ್ಷ ರೂಪಾಯಿ ಬಿಲ್ ಕಟ್ಟದೆ ಹೋಟೆಲಿಗೆ ಸತಾಯಿಸುತ್ತಿದ್ದರು. ಅಲ್ಲದೆ ಇದರಲ್ಲಿ 22 ಲಕ್ಷ ರೂಪಾಯಿ ಪಾವತಿಸಿ 3.53 ಲಕ್ಷ ರೂ. ಬಾಕಿ ಉಳಿಸಿಕೊಂಡಿದ್ದರು.

ಹಿನ್ನೆಲೆಯಲ್ಲಿ ಹೋಟೆಲ್ ಆಡಳಿತ ಮಂಡಳಿ ಪೊಲೀಸರಿಗೆ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಪೊಲೀಸರು ನಟಿ ವಿರುದ್ಧ ಎನ್ಸಿಆರ್ ದಾಖಲು ಮಾಡಿಕೊಂಡಿದ್ದಾರೆ. ಅಲ್ಲದೆ ದೂರು ದಾಖಲಾದ ಕೂಡಲೇ ಪೊಲೀಸರು ನಟಿಯನ್ನು ಠಾಣೆಗೆ ಕರೆಸಿದಾಗ, ಪೊಲೀಸರ ಸಮ್ಮುಖದಲ್ಲಿಯೇ ನಟಿ ಎರಡು ಲಕ್ಷ ರೂ. ನೀಡಿದ್ದಾರೆ. ಉಳಿದ ಹಣ ಕೊಡಲು ಕಾಲಾವಕಾಶ ಕೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos