ಮತ್ತೆ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಿಕೆ

ಮತ್ತೆ ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಿಕೆ

ಬೆಂಗಳೂರು, ಡಿ. 04: ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆ ಮುಂದೂಡಿಕೆಯಾಗಬೇಕು ಎಂಬ ಪಾಲಿಕೆ ಸದಸ್ಯರ ಹಠವೇ ಗೆದ್ದಿದೆ. ಇಂದು ನಡೆಯಬೇಕಿದ್ದ ಚುನಾವಣೆಯಲ್ಲಿ ಯಾವುದೇ ಸದಸ್ಯರು ಹಾಜರಾಗದೇ ಇದ್ದ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮತ್ತೊಮ್ಮೆ ಮುಂದೂಡಿಕೆ ಮಾಡಲಾಗಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಈ 3 ಪಕ್ಷಗಳ ಕಾರ್ಪೊರೇಟರ್ಗಳು ಚುನಾವಣೆಗೆಗೆ ಹಾಜರಾಗದಿರಲು ಒಮ್ಮತದಿಂದ ನಿರ್ಧಾರ ಕೈಗೊಂಡರೆನ್ನಲಾಗಿದೆ. ಚುನಾವಣೆಯನ್ನು ಮುಂದೂಡಿರುವ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ಅವರು ಮುಂದಿನ ಚುನಾವಣಾ ದಿನಾಂಕವನ್ನು ಪ್ರಕಟಿಸಿಲ್ಲ.

ಟೌನ್ಹಾಲ್ನಲ್ಲಿ ಇಂದು ಬೆಳಗ್ಗೆ 8ರಿಂದ 9:30ಯ ಅವಧಿಯಲ್ಲಿ 12 ಸ್ಥಾಯಿ ಸಮಿತಿ ಚುನಾವಣೆಗೆ ನಾಮಪತ್ರ ಸಲ್ಲಿಕೆಯಾಗಬೇಕಿತ್ತು. ಬೆಳಗ್ಗೆ 11 ಗಂಟೆಗೆ ಮತದಾನ ನಡೆಸಲು ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ನಿರ್ಧರಿಸಿದ್ದರು. ಅದರೆ, ನಿಗದಿತ ಅವಧಿಯಲ್ಲಿ ಯಾರೂ ಕೂಡ ನಾಮಪತ್ರ ಸಲ್ಲಿಕೆ ಮಾಡಿಲ್ಲ. ಹಾಗೆಯೇ, 198 ಪಾಲಿಕೆ ಸದಸ್ಯರ ಪೈಕಿ ಮೇಯರ್ ಗೌತಮ್ ಕುಮಾರ್ ಜೈನ್, ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್, ವಿಪಕ್ಷ ನಾಯಕ ಅಬ್ದುಲ್ ವಾಜಿದ್, ಜೆಡಿಎಸ್ನ ನೇತ್ರಾ ನಾರಾಯಣ್, ಮಾಜಿ ಮೇಯರ್ ಬಿ.ಎಸ್. ಸತ್ಯನಾರಾಯಣ ಮತ್ತು ಮಾಜಿ ವಿಪಕ್ಷ ನಾಯಕ ಪದ್ಮನಾಭ ರೆಡ್ಡಿ ಮಾತ್ರ ಉಪಸ್ಥಿತರಿದ್ದರು. ಚುನಾವಣೆ ನಡೆಯಲು ಕನಿಷ್ಠ 80 ಸದಸ್ಯ ಬಲವಾದರೂ ಬೇಕು. ಆದರೆ, ಸುಮಾರು 10 ಮಂದಿ ಮಾತ್ರ ಹಾಜರಿದ್ದರಿಂದ ಕೋರಂ ಕೊರತೆಯೂ ಇತ್ತು.

ಕೋರಂ ಕೊರತೆ ಮತ್ತು ನಾಮಪತ್ರ ಸಲ್ಲಿಕೆಯಾಗಿಲ್ಲದ ಕಾರಣದಿಂದ ಪ್ರಾದೇಶಿಕ ಆಯುಕ್ತ ಹರ್ಷ ಗುಪ್ತ ಅವರು 12 ಬಿಬಿಎಂಪಿ ಸ್ಥಾಯಿ ಸಮಿತಿ ಚುನಾವಣೆಯನ್ನು ಮುಂದೂಡಲು ನಿರ್ಧರಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos