ಜಂಟಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ವೆಂಕಟಾಚಲಪತಿ

ಜಂಟಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ವೆಂಕಟಾಚಲಪತಿ

ಕೆ.ಆರ್.ಪುರ, ಅ. 12: ಮಹದೇವಪುರ ಬಿಬಿಎಂಪಿ ವಲಯಕ್ಕೆ ನೂತನ ಜಂಟಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ವೆಂಕಟಾಚಲಪತಿ ಅವರು, ಅದರ ಬೆನ್ನಲ್ಲೇ ಮಹದೇವಪುರ ವಲಯ ವ್ಯಾಪ್ತಿಯಲ್ಲಿ ಬರುವ ಅಧಿಕಾರಿಗಳು ಮತ್ತು ಪಾಲಿಕೆ ಸದಸ್ಯರೊಂದಿಗೆ ಪರಿಚಯ ಮತ್ತು ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದರು.

ಮಹದೇವಪುರ ಬಿಬಿಎಂಪಿ ವಲಯ ವ್ಯಾಪ್ತಿಯಲ್ಲಿರುವ ಮೂಲ ಭೂತ ಸಮಸ್ಯೆಗಳು, ಸ್ಥಗಿತಗೊಂಡಿರು ಅಭಿವೃದ್ಧಿ ಕೆಲಸಗಳ ಬಗ್ಗೆ ಕೇಳಿ ತಿಳಿದು ಕೊಂಡಿದ್ದಾರೆ. ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿರುವ ಸಮಸ್ಯೆಗಳನ್ನು ಆದಷ್ಟು ಬೇಗ ಪರಿಹರಿಸುವಂತೆ ಹೇಳಿದರು. ಸಾರ್ವಜನಿಕರ ದೂರುಗಳನ್ನು ಗಾಳಿಗೆ ತೋರದೆ ಸಮಸ್ಯೆಗಳನ್ನು ಆದಷ್ಟೂ ಬೇಗ ಬಗೆಹರಿಸ ಬೇಕೆಂದು ಸಲಹೆ ನೀಡಿದರು.

ಪಾಲಿಕೆ ಸದಸ್ಯರಿಂದ ಮೂಲಭೂತ ಸೌಕರ್ಯಗಳ ಕುರಿತು ಹಲ

ವು ದೂರುಗಳು ಬಂದಿದ್ದು, ಆದಷ್ಟು ಬೇಗ ಪರಿ ಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಿ ಇ ಪರಮೇಶ್ವರಯ್ಯ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಗುಣಮಟ್ಟವನ್ನು ಸ್ಥಳೀಯವಾಗಿ ಗಮನಿಸುವಂತೆ ಪಾಲಿಕೆ ಸದ್ಯರಿಗೆ ಮತ್ತು ಸ್ಥಳೀಯ ಅಧಿಕಾರಿಗಿಗೆ ಮನವಿ ಮಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos