2020ಕ್ಕೆ ಪವರ್ ಸ್ಟಾರ್ ಪುನೀತ್ ಹೊಸ ಲುಕ್

2020ಕ್ಕೆ ಪವರ್ ಸ್ಟಾರ್ ಪುನೀತ್ ಹೊಸ ಲುಕ್

ಬೆಂಗಳೂರು, ಜ. 01: ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೊಸ ವರ್ಷಕ್ಕೆ ಹೊಸ ಲುಕ್ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ.

ಹೌದು ಅಪ್ಪು ಅಂದರೆ ಅದೇನು ಕನ್ನಡ ಚಿತ್ರರಂಗದಲ್ಲಿ ಅಭಿಮಾನಿಗಳಿಗೆ ಎಲ್ಲಿಲ್ಲದ ಹುಚ್ಚು. ಅದರಲ್ಲೂ ಯುವರತ್ನ ಚಿತ್ರದ ಹೊಸ ಲುಕ್ ನಲ್ಲಿ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಅಪ್ಪು ಅವರು ಹೊಸ ಲುಕ್ ನಲ್ಲಿ ಅಸ್ತಿಪಂಜಿರದ ಜೊತೆ ನಿಂತಿರುವುದು ವಿಶೇಷವಾಗಿದೆ.

ಹೌದು, ಅಪ್ಪು ಅಭಿನಯದ ಬಹುನಿರೀಕ್ಷೆಯ ಯುವರತ್ನ ಚಿತ್ರದ ಹೊಸ ಲುಕ್ ರಿಲೀಸ್ ಆಗಿದೆ. ಹೊಸ ಲುಕ್ ನಲ್ಲಿ ಪವರ್ ಸ್ಟಾರ್ ಮತ್ತಷ್ಟು ಯಂಗ್ ಅಂಡ್ ಎನರ್ಜಿಟಿಕ್ ಆಗಿ ಮಿಂಚಿರುವುದನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ನಿರ್ದೇಶಕ ಸಂತೋಷ್ ಆನಂದ್ ರಾಮ್ ಸಾರಥ್ಯದಲ್ಲಿ ಮೂಡಿ ಬಂದಿರುವ ‘ಯುವರತ್ನ’ ಕನ್ನಡ ಚಿತ್ರಾಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಹುಟ್ಟುಹಾಕಿದೆ. ಈಗಾಗಲೆ ಟೀಸರ್ ರಿಲೀಸ್ ಆಗಿದ್ದು, ಪುನೀತ್ ರಾಜ್ ಕುಮಾರ್ ರಗ್ಬಿ ಆಟಗಾರನಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ರಿಲೀಸ್ ಆಗಿರುವ ಹೊಸ ಲುಕ್ ನಲ್ಲಿ ಅಪ್ಪು ಅಸ್ಥಿಪಂಜರದ ಜೊತೆ ಎಂಟ್ರಿ ಕೊಟ್ಟಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos