ನಾಮಪತ್ರ ಸಲ್ಲಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್

ನಾಮಪತ್ರ ಸಲ್ಲಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಶಾಮನೂರು ಆಂಜನೇಯ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ನಿಟುವಳ್ಳಿ ಬಡಾವಣೆಯ ಗ್ರಾಮದೇವತೆ ದುರ್ಗಾಂಬಿಕಾ ದೇವಸ್ಥಾನದಲ್ಲಿ ಪತಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಜೊತೆಗೂಡಿ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ನಾಮಪತ್ರ ಸಲ್ಲಿಸಿದರು. ದಾರಿಯುದ್ದಕ್ಕೂ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಮನೂರು ಶಿವಶಂಕರಪ್ಪ ಹಾಗೂ ಎಸ್.ಎಸ್. ಮಲ್ಲಿಕಾರ್ಜುನ್ ಪರ ಕಾರ್ಯಕರ್ತರು ಜೈಕಾರ ಕೂಗಿದರು. ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್, ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹಾಗೂ ಮುಖಂಡರು ಇದ್ದರು.

ಫ್ರೆಶ್ ನ್ಯೂಸ್

Latest Posts

Featured Videos