ಹಾಸನ, ಮಾ.21, ನ್ಯೂಸ್ ಎಕ್ಸ್ ಪ್ರೆಸ್: ದೇವೇಗೌಡರ ಅಖಾಡದಿಂದ ಇದೀಗ ಮೊಮ್ಮಗ ಪ್ರಜ್ವಲ್ ರೇವಣ್ಣ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಶುಭ ಗಳಿಗೆ ನೋಡಿದ್ದು, ನಾಳೆ ಶುಕ್ರವಾರದಂದು ಮಧ್ಯಾಹ್ನ 12.05 ರಿಂದ 1 ಗಂಟೆಯೊಳಗೆ ಪುತ್ರ ಪ್ರಜ್ವಲ್ ನಾಮಪತ್ರ ಸಲ್ಲಿಸಲಿದ್ದಾರೆ ಅಂತಾ ಸಚಿವ ಹೆಚ್.ಡಿ. ರೇವಣ್ಣ ತಿಳಿಸಿದ್ದಾರೆ. ಇದಕ್ಕೂ ಮುನ್ನ ಲಕ್ಷ್ಮೀ ನರಸಿಂಹ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದು ಬಳಿಕ ನಗರದಲ್ಲಿ ಬಹಿರಂಗ ಸಭೆ ನಡೆಸುವುದಾಗಿ ಹೇಳಿದ್ರು.
ಇದೇ ವೇಳೆ ಕಾಂಗ್ರೆಸ್-ಜೆಡಿಎಸ್ ಜಂಟಿ ಪ್ರಚಾರ ನಡೆಸುವ ದಿನ ಇನ್ನೂ ನಿಗದಿಯಾಗಿಲ್ಲ. ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿ ದಿನ ನಿಗದಿಪಡಿಸಲಾಗುವುದು ಎಂದು ರೇವಣ್ಣ ತಿಳಿಸಿದ್ದಾರೆ.
ನಾಳೆ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಈಗಾಗಲೇ ಶೃಂಗೇರಿಗೆ ತೆರಳಿರುವ ಪ್ರಜ್ವಲ್, ನಾಮಪತ್ರವನ್ನು ಶಾರದಾಂಬೆಯ ಪಾದದಡಿ ಇಟ್ಟು ವಿಶೇಷ ಪೂಜೆ ಸಲ್ಲಿಸಿದ್ದಾರೆ.