ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಬಿಜೆಪಿಗೆ ಮುಜುಗರ ತಂದಿದೆ: ಅರವಿಂದ ಲಿಂಬಾವಳಿ

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ: ಬಿಜೆಪಿಗೆ ಮುಜುಗರ ತಂದಿದೆ: ಅರವಿಂದ ಲಿಂಬಾವಳಿ

ವಿಜಯಪುರ: ಜೆಡಿಎಸ್ ನ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನು ಎಬ್ಬಿಸಿದೆ.

ಇನ್ನು ಇದರ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅವರು, ಈ ಕೃತ್ಯ ಇಡೀ ಬಿಜೆಪಿ ಪಕ್ಷ ತಲೆತಗ್ಗಿಸುವಂಥ ಕೃತ್ಯವೆಂದು ಹೇಳಿದ್ದಾರೆ.

ಇದನ್ನೂ ಓದಿ: ಕಲಬುರಗಿಯಲ್ಲಿ ಕಳ್ಳರ ದುಕಾನ್ ಬಂದ್ ಆಗಿವೆ: ಪ್ರಿಯಾಂಕ್ ಖರ್ಗೆ

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ ಎಸ್ ಈಶ್ವರಪ್ಪ ಅವರು, ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಹಗರಣದ ವಿಚಾರವಾಗಿ ರಾಜ್ಯದಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವ ಬಿಜೆಪಿಗೆ ಮುಖಭಂಗವಾಗಿದೆ ಎಂದು ಅರವಿಂದ ಲಿಂಬಾವಳಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ಈ ವಿಷಯ ಖಂಡಿತವಾಗಿಯೂ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ ಎಂಬುದನ್ನು ನಾವು ಒಪ್ಪಿಕೊಂಡಿದ್ದೇವೆ. ಆದರೆ ಬಿಜೆಪಿ ಆರೋಪಿಯನ್ನು ಬೆಂಬಲಿಸುವುದಿಲ್ಲ ಅಥವಾ ಅವರ ಜೊತೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಇನ್ನು ಕಾನೂನಿನ ಪ್ರಕಾರ ಕಠಿಣ ಕ್ರಮಕ್ಕೆ ಆಗ್ರಹಿಸುತ್ತೇವೆ. ತನಿಖೆಯಲ್ಲಿ ಪಕ್ಷ ಯಾವುದೇ ಅಡೆತಡೆ ಸೃಷ್ಟಿಸುವುದಿಲ್ಲ ಎಂದರು.

ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಕಾಂಗ್ರೆಸ್ ಈ ವಿಷಯವನ್ನು ರಾಜಕೀಯಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಲಿಂಬಾವಳಿ ಆರೋಪಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos