ಪ್ರಜ್ವಲ್ ರೇವಣ್ಣ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ

ಪ್ರಜ್ವಲ್ ರೇವಣ್ಣ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ

ನವದೆಹಲಿ, ಜೂ. 26 : ಯುವ ನಾಯಕರು ಎನಿಸಿಕೊಂಡಿ ಹಾಸನ ಲೋಕಸಭಾ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಮತ್ತು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ತೇಜಸ್ವಿ ಸೂರ್ಯ ವಾಗ್ದಾಳಿ ಶುರುವಾಗಿದೆ.

ರಾಜ್ಯದಲ್ಲಿ ಅತಿ ಭ್ರಷ್ಟ ಸರ್ಕಾರ ಆಡಳಿತದಲ್ಲಿದೆ ಎಂದು ಕಾಂಗ್ರೆಸ್-ಜೆಡಿಎಸ್ ನ ಮೈತ್ರಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರಿಗೆ ಪ್ರಜ್ವಲ್ ರೇವಣ್ಣ ತಿರುಗೇಟು ನೀಡಿದ್ದಾರೆ. ಅಧಿವೇಶನದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ, ದೇಶ ಪ್ರಗತಿಯತ್ತ ಮುನ್ನುಗುತ್ತಿದ್ದರೆ, ಕರ್ನಾಟಕ ಮಾತ್ರ ಹಿಂದುಳಿಯುತ್ತಿದೆ. ನನ್ನ ರಾಜ್ಯ ಅಭಿವೃದ್ಧಿ ಕಾಣಬೇಕು ಎಂಬುದು ನನ್ನ ಇಚ್ಛೆ. ರಾಜ್ಯದಲ್ಲಿ ಕೋಟ್ಯಂತರ ರೂಪಾಯಿ ಐಎಂಎಫ್​ ಹಗರಣ ನಡೆದಿದೆ. 10 ಸಾವಿರ ಎಫ್​ಐಆರ್​ ದಾಖಲಾದರೂ ಮೈತ್ರಿ ಸರ್ಕಾರದ ನಾಯಕರ ಬೆಂಬಲದಿಂದ ಏನು ಮಾಡಲು ಸಾಧ್ಯವಾಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಫ್ರೆಶ್ ನ್ಯೂಸ್

Latest Posts

Featured Videos