ಪ್ರಜ್ವಲ್ ರೇವಣ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ಗಂಭೀರ ದೂರು

ಪ್ರಜ್ವಲ್ ರೇವಣ್ಣ ವಿರುದ್ಧ ಚುನಾವಣಾ ಆಯೋಗಕ್ಕೆ ಗಂಭೀರ ದೂರು

ಹಾಸನ, ಏ. 16, ನ್ಯೂಸ್ ಎಕ್ಸ್ ಪ್ರೆಸ್: ಹಾಸನ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ನಾಮಪತ್ರದಲ್ಲಿ ಆಸ್ತಿ ವಿವರ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ. ಇದೊಂದು ಗಂಭೀರ ದೂರಾಗಿದ್ದು, ಆರೋಪ ಸಾಬೀತಾದಲ್ಲಿ ಪ್ರಜ್ವಲ್ ರೇವಣ್ಣ ಚುನಾವಣೆಯಲ್ಲಿ ಗೆದ್ದರೂ ಲೋಕಸಭೆ ಸದಸ್ಯತ್ವ ಕಳೆದುಕೊಳ್ಳಲಿದ್ದಾರೆ. ಪ್ರಜ್ವಲ್ ರೇವಣ್ಣ ನಾಮಪತ್ರ ಮರುಪರಿಶೀಲನೆಗೆ ಚುನಾವಣಾ ಆಯೋಗ ನೋಟಿಸ್ ಪ್ರಜ್ವಲ್ ರೇವಣ್ಣ ಅವರು ತಮ್ಮ ಹೆಸರಿನಲ್ಲಿರುವ ಆರು ಕೋಟಿ ಮೌಲ್ಯದ ಆಸ್ತಿಯೊಂದರ ಬಗ್ಗೆ ಆಯೋಗಕ್ಕೆ ಮಾಹಿತಿ ನೀಡಿಲ್ಲವೆಂದು ವಕೀಲರೊಬ್ಬರು ಆಯೋಗಕ್ಕೆ ಲಿಖಿತ ದೂರು ಸಲ್ಲಿಸಿದ್ದಾರೆ. ಜೊತೆಗೆ ಸಾಕ್ಷ್ಯವನ್ನೂ ರವಾನಿಸಿದ್ದಾರೆ ಎನ್ನಲಾಗಿದೆ. ಹೊಳೆನರಸೀಪುರದಲ್ಲಿರುವ ಚೆನ್ನಕಾಂಬ ಕನ್ವೆನ್ಶನ್ ಹಾಲ್‌ಗೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಆಯೋಗಕ್ಕೆ ನೀಡಿರುವ ಮಾಹಿತಿಯಲ್ಲಿ ವಾಣಿಜ್ಯ ಕಟ್ಟಡಗಳನ್ನು ತಾವು ಹೊಂದಿಲ್ಲವೆಂದು ರೇವಣ್ಣ ಹೇಳಿದ್ದಾರೆ. ಆದರೆ ಚೆನ್ನಕಾಂಬಾ ಕನ್ವೆನ್ಶನ್ ಹಾಲ್‌ ರೇವಣ್ಣ ಅವರದ್ದೇ ಆಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಆಸ್ತಿ, ಸಾಲ ವಿವರ ಅಷ್ಟೆ ಅಲ್ಲದೆ, ದೇವೇಗೌಡ ಅವರ ನಾಮಪತ್ರದಲ್ಲಿ ಪ್ರಜ್ವಲ್ ರೇವಣ್ಣಗೆ 23 ಲಕ್ಷ ಕೊಟ್ಟಿರುವುದಾಗಿ ನಮೂದು ಮಾಡಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ಅವರ ನಾಮಪತ್ರದಲ್ಲಿ ಈ ಬಗ್ಗೆ ಯಾವುದೇ ಉಲ್ಲೇಖಗಳು ಇಲ್ಲ. ಇದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದು ದೂರುದಾರರು ಆತಂಕ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಪ್ರಜ್ವಲ್ ರೇವಣ್ಣ ಅವರ ಮೇಲಿನ ಆರೋಪ ಸಾಬೀತಾದಲ್ಲಿ ಅವರು ಚುನಾವಣೆಯಲ್ಲಿ ಗೆದ್ದರೂ ಸದಸ್ಯತ್ವವನ್ನು ಕಳೆದುಕೊಳ್ಳುವ ಅಪಾಯವಿದೆ.

ಫ್ರೆಶ್ ನ್ಯೂಸ್

Latest Posts

Featured Videos