ಪ್ರಜ್ವಲ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿ ಬಂಧನಕ್ಕೆ ಆಗ್ರಹಿಸಿದ ಎನ್‌ಸಿಡಬ್ಲ್ಯು

  • In Crime
  • April 30, 2024
  • 14 Views
ಪ್ರಜ್ವಲ ಲೈಂಗಿಕ ದೌರ್ಜನ್ಯ ಪ್ರಕರಣ : ಆರೋಪಿ ಬಂಧನಕ್ಕೆ ಆಗ್ರಹಿಸಿದ ಎನ್‌ಸಿಡಬ್ಲ್ಯು

ನವದೆಹಲಿ: ಕರ್ನಾಟಕ ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಂಘ ಸಂಸ್ಥೆಗಳು ಪ್ರತಿಭಟನೆ ಮಾಡಿದ್ದು, ಕೂಡಲೇ ಪ್ರಜ್ವಲ್ ರೇವಣ್ಣ ಅವರನ್ನು ಬಂಧನ ಮಾಡಬೇಕೆಂದು, ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.

ಇನ್ನು ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ದಿನಗಳಿಂದ ನಡೆದಿರುವ ವರದಿ ಕಲೆಹಾಕಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

ಹೌದು, ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರು ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಕುರಿತು ಮೂರು ದಿನಗಳಲ್ಲಿ ವರದಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗನಕರ್ನಾಟಕ ಪೊಲೀಸರಿಗೆ ಸೂಚಿಸಿದೆ.

ಈ ಸಂಬಂಧ ಕರ್ನಾಟಕ ಡಿಜಿಪಿಗೆ ಪತ್ರ ಬರೆದಿರುವ ಎನ್‌ಸಿಡಬ್ಲ್ಯೂ, ಪ್ರಜ್ವಲ್ ರೇವಣ್ಣ ಅವರು ಅನೇಕ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವೀಡಿಯೊ ತುಣುಕುಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಈ ಬಗ್ಗೆ ಶೀಘ್ರ ಕ್ರಮ ತೆಗೆದುಕೊಳ್ಳುವಂತೆ ಕೇಳಿಕೊಂಡಿದೆ.

ಆಯೋಗವು ಈ ಘಟನೆಯನ್ನು ಬಲವಾಗಿ ಖಂಡಿಸುತ್ತದೆ ಮತ್ತು ಘಟನೆಯಿಂದ ತೀವ್ರ ವಿಚಲಿತವಾಗಿರುವುದಾಗಿ ಎನ್‌ಸಿಡಬ್ಲ್ಯು ಪತ್ರದಲ್ಲಿ ಹೇಳಿದೆ.

ಫ್ರೆಶ್ ನ್ಯೂಸ್

Latest Posts

Featured Videos