ಹಾಸನ, ಮಾ.23, ನ್ಯೂಸ್ ಎಕ್ಸ್ ಪ್ರೆಸ್: ನಗರದ ಸರ್ಕಾರಿ ಕಾನೂನು ಕಾಲೇಜು ಮತ್ತು ಸರ್ಕಾರಿ ಕಾಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ (ಸ್ವಾಯತ್ತ) ಕಾಲೇಜು ವಿದ್ಯಾರ್ಥಿಗಳಿಗೆ ವಿನಾ ಕಾರಣ ಕಲಾ ಕಾಲೇಜಿನ ಪ್ರಾಂಶುಪಾಲರು ಹಾಗೂ ಕೆಲ ಉಪನ್ಯಾಸಕರು ಅಮಾನವೀಯವಾಗಿ ಹಲ್ಲೆ ನಡೆಸಿದ ಅನಾಗರಿಕ ವರ್ತನೆಯನ್ನು ಖಂಡಿಸಿ ಎಸ್‍ಎಫ್ ಐ ನಿಂದ ಪ್ರತಿಭಟನೆ ನಡೆಸಲಾಯಿತು.
ಇಂದು ಎಸ್‍ಎಫ್‍ಐ ಹಾಸನ ಜಿಲ್ಲಾ ಸಮಿತಿಯಿಂದ ಪ್ರತಿಭಟನೆ ನಡೆಸಿ, ಹಲ್ಲೆ ನಡೆಸಿದ ಪ್ರಾಂಶುಪಾಲರು, ಉಪನ್ಯಾಸಕನ್ನು ಅಮಾನತ್ತುಗೊಳಿಸಿ, ಅವರ ಮೇಲೆ ಕಾನೂನು ಕ್ರಮ ಜರುಗಿಸಬೇಕೆಂದು ಆಗ್ರಹಿಸಲಾಯಿತು. ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ಎಸ್‍ಎಫ್‍ಐ ಹಾಸನ ಜಿಲ್ಲಾಧ್ಯಕ್ಷೆ ಆಶಾ, ಜಿಲ್ಲಾ ಸಹ ಕಾರ್ಯದರ್ಶಿ ವಿವೇಕ್, ಹಾಸನ ತಾಲ್ಲೂಕು ಅಧ್ಯಕ್ಷೆ ಸೌಂದರ್ಯ, ಕಾರ್ಯದರ್ಶಿ ಮನೋಹರ್ ಮುಖಂಡರಾದ ಪ್ರಮಿತಾ, ಶೋಭಾ, ಡಿವೈಎಫ್‍ಐನ ಜಿಲ್ಲಾ ಕಾರ್ಯದರ್ಶಿ ಪೃಥ್ವಿ, ಸಿಐಟಿಯುನ ಅರವಿಂದ ಸೇರಿದಂತೆ ನೂರಾರು ವಿದ್ಯಾರ್ಥಿಗಳಿದ್ದರು.