ಅವಹೇಳನಕಾರಿ ಟ್ವೀಟ್ ಪ್ರಕರಣ: ಸಂಸದ ಪ್ರತಾಪ್ ಸಿಂಹ ನ್ಯಾಯಾಂಗ ವಶಕ್ಕೆ

ಅವಹೇಳನಕಾರಿ ಟ್ವೀಟ್ ಪ್ರಕರಣ: ಸಂಸದ ಪ್ರತಾಪ್ ಸಿಂಹ ನ್ಯಾಯಾಂಗ ವಶಕ್ಕೆ

ಬೆಂಗಳೂರು, ಮಾ.8, ನ್ಯೂಸ್ ಎಕ್ಸ್ ಪ್ರೆಸ್: ಪ್ರಕಾಶ್ ರೈ ಅವರು ತಮ್ಮ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಪ್ರತಾಪ್ ಸಿಂಹ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರನ್ನು ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ಸಂಸದ ಪ್ರತಾಪ್ ಸಿಂಹ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು. ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಪ್ರತಾಪ್ ಸಿಂಹ ಹಾಜರಾಗಿದ್ದರು.

ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರ ಆದೇಶದ ಮೇರೆಗೆ ಪೊಲೀಸರು ಪ್ರತಾಪ್ ಸಿಂಹರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಮತ್ತೆ ರೀ ಕಾಲ್ ಮಾಡುವವರೆಗೆ ಕಸ್ಟಡಿಗೆ ಪಡೆಯುವಂತೆ ಕೋರ್ಟ್ ಸೂಚನೆ ನೀಡಿದೆ.

ಪ್ರತಾಪ್ ಸಿಂಹ ಅವರು ಪ್ರಕಾಶ್ ರೈ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟರ್ ನಲ್ಲಿ ಪೋಸ್ಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಕಾಶ್ ರೈ ಅವರು ಪ್ರತಾಪ್ ಸಿಂಹ ವಿರುದ್ಧ ಕೇವಲ 1 ರೂ. ಪರಿಹಾರ ಕೋರಿ ಮೈಸೂರಿನ ನ್ಯಾಯಾಲಯಕ್ಕೆ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos