ಸಿದ್ದು ಹೇಳೊದ್ರಲ್ಲಿ ತಪಿಲ್ಲಾ ಪ್ರತಾಪ್ ಸಿಂಹ.

ಸಿದ್ದು ಹೇಳೊದ್ರಲ್ಲಿ ತಪಿಲ್ಲಾ ಪ್ರತಾಪ್ ಸಿಂಹ.

ಮೈಸೂರು: ಯದುವೀರ್ ಯಾವ ರಾಜ ರೀ ಎಂಬ  ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನ ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಮರ್ಥಿಸಿಕೊಂಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಸಂಸದ ಪ್ರತಾಪ್ ಸಿಂಹ,  ಸ್ವಾತಂತ್ರ್ಯ ಬಂದ ನಂತರ ಸಂವಿಧಾನ ಜಾರಿಯಾದ ದಿನದಿಂದ ರಾಜ ಮಹಾರಾಜ ಎಂಬುದಿಲ್ಲ. ಇದರಲ್ಲಿ ಹುಳುಕು ಹುಡುಕುವುದು ತಪ್ಪು. ಯದುವೀರ್ ಬಿಜೆಪಿ ಅಭ್ಯರ್ಥಿ,  ನಾನು ಕೂಡು ಹೇಳಿಕೆ ಕೊಡುವಾಗ ಅವರು ಪ್ರಜಾ ಪ್ರತಿನಿಧಿಯಾಗಿರಬೇಕು ಅಂತಾ ಅವತ್ತೇ ನಾನು ಹೇಳಿದ್ದೆ. ಯದುವೀರ್ ಪ್ರಜಾ ಪ್ರತಿನಿಧಿಯಾಗಲು ಬಂದಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಸಿಎಂ ಹೇಳಿಕೆ ಹುಳುಕು ಅನ್ನಿಸುತ್ತಿಲ್ಲ. ಸಿಎಂ ಹೇಳಿರುವುದರಲ್ಲಿ ತಪ್ಪಿಲ್ಲ ಎಂದರು.

ದೇಶದಲ್ಲಿ ರಾಜಾಡಳಿತ ಇಲ್ಲ. ನವರಾತ್ರಿ ಸಂಧರ್ಭದಲ್ಲಿ ಖಾಸಗಿ ದರ್ಬಾರ್ ನಡೆಸುವಾಗ ವಿಧಿ ವಿಧಾನಗಳಿಗೆ ಸೀಮಿತವಾಗಿರುತ್ತಾರೆ. ಸಿಎಂ ಸಿದ್ದರಾಮಯ್ಯ ಅವರನ್ನ ಸೈದ್ಧಾಂತಿಕವಾಗಿ ವಿರೋಧಿಸುತ್ತೇನೆ. ನನಗು ಅವರಿಗೂ ಬಹಳಷ್ಟು ವಿರೋಧಗಳು ಇದೆ. ಮೈಸೂರಿನ ಜನ ಯದುವೀರ್ ಅವರನ್ನ ಮಹಾರಾಜ ಅಂಥ ಕರೆಯುತ್ತೀರಾ? ಅಥವಾ ಬಿಜೆಪಿ ಅಭ್ಯರ್ಥಿ ಅಂಥ ಕರೆಯುತ್ತೀರಾ? ಮಹಾರಾಜರು ಅರಮನೆಗೆ ಸೀಮಿತವಾಗಿರದೆ ಜನಪ್ರತಿನಿಧಿಯಾಗಲು ಬಂದಿದ್ದಾರೆ. ಹೀಗಾಗಿ ಸಿಎಂ ಬಿಜೆಪಿ ಅಭ್ಯರ್ಥಿ ಎಂದು ಕರೆದಿರುವುದರಲ್ಲಿ ತಪ್ಪಿಲ್ಲ ಎಂದು ಪ್ರತಾಪ್ ಸಿಂಹ ತಿಳಿಸಿದರು.

 

ಫ್ರೆಶ್ ನ್ಯೂಸ್

Latest Posts

Featured Videos