ಪ್ರತಿಭಟನೆಗೆ ನನಗೆ ಆಹ್ವಾನ ನೀಡಿಲ್ಲ

ಪ್ರತಿಭಟನೆಗೆ ನನಗೆ ಆಹ್ವಾನ ನೀಡಿಲ್ಲ

ರಾಮನಗರ , ಸೆ. 11 : ಬೆಂಗಳೂರಿನಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಪರ ನಡೆಯುತ್ತಿರುವ ಪ್ರತಿಭಟನೆಗೆ ನನಗೆ ಆಹ್ವಾನ ನೀಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಚನ್ನಪಟ್ಟಣದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಡಿಕೆಶಿ ಬಂಧನ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ನನ್ನ ಗಮನಕ್ಕೆ ತರದೇ ತರಾತುರಿಯಲ್ಲಿ ಕಾರ್ಯಕ್ರಮ ಮಾಡಿಕೊಂಡಿದ್ದಾರೆ. ಅಲ್ಲದೇ ಮೊದಲೇ ಹೇಳಿದ್ದರೆ ಅಥವಾ ಇನ್ವಿಟೇಷನ್ ನೀಡುತ್ತಿದ್ದರೆ ನಾನು ಭಾಗವಹಿಸುತ್ತಿದ್ದೆ. ಅದರಲ್ಲಿ ಏನು ಇದೆ. ಒಟ್ಟಿನಲ್ಲಿ ನನಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಿಲ್ಲ ಎಂದು ತಿಳಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos