ತುಮಕೂರು, ಸೆ. 27 : ರಾಜ್ಯದ ಪ್ರವಾಸಿ ತಾಣಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ 2020ರಲ್ಲಿ ಪ್ರವಾಸೋದ್ಯಮ ನೀತಿ ಜಾರಿಗೊಳಿಸಲಾಗುವುದೆಂದು ಸಚಿವ ಸಿ.ಟಿ.ರವಿ ತಿಳಿಸಿದರು.
ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುವ ಯೋಜನೆಯನ್ನು ತಯಾರಿಸಿ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಅಲ್ಪಾವಧಿ ಹಾಗೂ ದೀರ್ಘಾವಧಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.