ಪ್ರತಿಭಟನೆಗೆ ಪೂರ್ವಾನುಮತಿ ಕಡ್ಡಾಯ

ಪ್ರತಿಭಟನೆಗೆ ಪೂರ್ವಾನುಮತಿ ಕಡ್ಡಾಯ

ಬೆಂಗಳೂರು, ಸೆ. 14: ರಾಜಕೀಯ, ಧಾರ್ಮಿಕ ಸಂಘಟನೆಗಳು ಹಾಗೂ ಸಾಮಾಜಿಕ ಗುಂಪುಗಳು ನಗರದಲ್ಲಿ ಆಗಾಗ್ಗೆ ಏರ್ಪಡಿಸುವ ಮೆರವಣಿಗೆ ಹಾಗೂ ಪ್ರತಿಭಟನೆಗಳಿಂದ ಸಾರ್ವಜನಿಕರಿಗೆ ತೊಂದರೆ, ಸುಗಮ ವಾಹನ ಸಂಚಾರಕ್ಕೆ ಧಕ್ಕೆಯಾಗುತ್ತಿರುವ ಹಿನ್ನಲೆಯಲ್ಲಿ, ಸಭೆ ಮತ್ತು ಮೆರವಣಿಗೆ ಸಂದರ್ಭಗಳಲ್ಲಿ ಪೊಲೀಸರ ಅನುಮತಿ ಕಡ್ಡಾಯವಾಗಿರುತ್ತದೆ.

ಸಾರ್ವಜನಿಕರಿಗೆ ಅನನುಕೂಲ ಉಂಟಾಗದಂತೆ ಹಾಗೂ ವಾಹನಗಳ ಸುಗಮ ಸಂಚಾರ ನಿರ್ವಹಣೆ ಮಾಡುವ ದೃಷ್ಟಿಯಿಂದ ಮೆರವಣಿಗೆ ಹಾಗೂ ಪ್ರತಿಭಟನೆಗಳನ್ನು ನಿಯಂತ್ರಣಗೊಳಿಸಲು ಮತ್ತು ಕ್ರಮಬದ್ಧಗೊಳಿಸಲು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಸಭೆ ಮತ್ತು ಮೆರಣಿಗೆಯನ್ನು ಆಯೋಜಿಸುವಂತಹ ಸಂಘಟನಾಕಾರರು  ಕಾರ್ಯಕ್ರಮ ಆಯೋಜಿಸುವ ಪೂರ್ವದಲ್ಲಿ ಮತ್ತು ಕಾರ್ಯಕ್ರಮ ಜರಗುವ ಸಂದರ್ಭದಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ಕ್ರಮಗಳ  ಮತ್ತು ಮೆರಣಿಗೆಯನ್ನು ಆಯೋಜಿಸುವಂತಹ ಸಂಘಟನಾಕಾರರು ಅಂಥ ಕಾರ್ಯಕ್ರಮವನ್ನು ಆಯೋಜಿಸುವ ಪೂರ್ವದಲ್ಲಿ ಮತ್ತು ಕಾರ್ಯಕ್ರಮ ಜರಗುವ ಸಂದರ್ಭದಲ್ಲಿ ಕಡ್ಡಾಯವಾಗಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ.

ಸೂಚನೆಗಳು

ನಗರದಲ್ಲಿ 2009ರ ಅಡಿಯಲ್ಲಿ ಅನುಮತಿಯನ್ನು ಪಡೆಯದೆ ಯಾವುದೇ ಪ್ರತಿಭಟನೆ ಮತ್ತು ಮೆರಣಿಗೆ ನಡೆಸುವಂತಿಲ್ಲ. ಪ್ರತಿಭಟನೆ ನಡೆಸಲು ಅನುಮತಿಗಾಗಿ ಅರ್ಜಿಯನ್ನು ನಿಗದಿತ ಫಾರಂ-1ರಲ್ಲಿ ಸಲ್ಲಿಸಬೇಕು.

ಮೆರಣಿಗೆಯು ಒಂದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುವುದಿದ್ದಲ್ಲಿ ಸಂಬಂಧಪಟ್ಟ ಠಾಣಾ ವ್ಯಾಪ್ತಿಯ ಪೊಲೀಸ್ ಇನ್ಸ್ಪೆಕ್ಟರ್ ಅವರಿಗೆ ಫಾರಂ ಸಲ್ಲಿಸಬೇಕು. ಯಾವ ದಿನಾಂಕದಂದು ಮೆರವಣಿಗೆ ಅಥವಾ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆಯೋ ಆ ದಿನಾಂಕವನ್ನು ಹೊರತುಪಡಿಸಿ ಕನಿಷ್ಠ 7 ದಿನ ಮುಂಚಿತವಾಗಿ ಅನುಮತಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಲು ಆಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos