ಕೋವಿಡ್ ಸೋಂಕಿತರಿಗೆ ಹಾಸಿಗೆ ಮೀಸಲಿಡಲು ಖಾಸಗಿ ಆಸ್ಪತ್ರೆಗಳ ಒಪ್ಪಿಗೆ

  • In State
  • July 3, 2020
  • 213 Views
ಕೋವಿಡ್ ಸೋಂಕಿತರಿಗೆ ಹಾಸಿಗೆ ಮೀಸಲಿಡಲು ಖಾಸಗಿ ಆಸ್ಪತ್ರೆಗಳ ಒಪ್ಪಿಗೆ

ಬೆಂಗಳೂರು: ಕೊರೋನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಹಂಚಿಕೆಗೆ ಸಮರ್ಪಕ ವ್ಯವಸ್ಥೆ ರೂಪಿಸುವ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು ನೂತನ ಮಾರ್ಗಸೂಚಿಗಳು ನಾಳೆಯೇ ಬಿಡುಗಡೆಯಾಗುವ ಸಾಧ್ಯತೆಗಳಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿದರು.

ರಾಜ್ಯದಲ್ಲಿ ಹೆಚ್ಚುತ್ತಿರುವ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು.

ಖಾಸಗಿ ಆಸ್ಪತ್ರೆಗಳೂ ಕೋವಿಡ್ ಸೋಂಕಿತರಿಗಾಗಿ ಹಾಸಿಗೆಗಳನ್ನು ಮೀಸಲಿಡಲು ಒಪ್ಪಿಕೊಂಡಿವೆ. ತಜ್ಞರುಗಳ ಸಲಹೆಯನ್ನು ಗಮನದಲ್ಲಿಟ್ಟುಕೊಂಡು, ಮುಂದಿನ ದಿನಗಳಲ್ಲಿ ಪರೀಕ್ಷಾ ಸಾಮರ್ಥ್ಯ ಸೇರಿದಂತೆ ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದ ಎಲ್ಲಾ ಸೌಲಭ್ಯಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಕಾರ್ಯತಂತ್ರ ರೂಪಿಸಲಾಗಿದೆ. ಸೋಂಕಿನ ಲಕ್ಷಣ ಇಲ್ಲದವರಿಗೆ ಮನೆಯಲ್ಲೇ ಚಿಕಿತ್ಸೆ ನೀಡುವ ಕುರಿತಂತೆ ಕೂಡ ಸಭೆಯಲ್ಲಿ ಚರ್ಚಿಸಲಾಗಿದ್ದು ಎಲ್ಲಾ ಅಗತ್ಯ ಕ್ರಮಗಳನ್ನು ತುರ್ತಾಗಿ ಕೈಗೊಳ್ಳಲಾಗುವುದು ಎಂದರು.

ಗದುಗಿನ ಮೆಡಿಕಲ್ ಕಾಲೇಜಿನಲ್ಲಿ ರಾಜ್ಯದ 79ನೇ ಕೋವಿಡ್ ಪ್ರಯೋಗಾಲಯಕ್ಕೆ ಗುರುವಾರ ಚಾಲನೆ ನೀಡಲಾಯಿತು. ಬೆಂಗಳೂರಿನಿಂದಲೇ ಆನ್‌ಲೈನ್ ಮೂಲಕ ಲ್ಯಾಬ್‌ಗೆ ಚಾಲನೆ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಗದುಗಿನ ವೈದ್ಯಕೀಯ ಕಾಲೇಜು ಇಡೀ ರಾಜ್ಯವೇ ಹೆಮ್ಮೆ ಪಡುವಂತಹ ಸಾಧನೆ ಮಾಡಿದೆ. ಪ್ರಾರಂಭವಾದ 5 ವರ್ಷ ಅವಧಿಗೂ ಮುನ್ನವೇ ಪಿಜಿ ಕೋರ್ಸ್ಗಳನ್ನು ಆರಂಭಿಸಲು ಅನುಮತಿ ಪಡೆದ, ದೇಶದಲ್ಲೇ ಮೊದಲ ಮೆಡಿಕಲ್ ಕಾಲೇಜು ಇದಾಗಿದೆ ಎಂದು ಬಣ್ಣಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos