ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನ ‘ಕ್ವೀನ್’ ಆಗಲಿದ್ದಾರೆ: ಶಿವಸೇನೆ ಅಭಿಪ್ರಾಯ

ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ನ ‘ಕ್ವೀನ್’ ಆಗಲಿದ್ದಾರೆ: ಶಿವಸೇನೆ ಅಭಿಪ್ರಾಯ

ಮುಂಬೈ: ಸಕ್ರಿಯ ರಾಜಕೀಯಕ್ಕೆ ಪ್ರವೇಶ ಮಾಡಿರುವ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತಮ್ಮ ಜವಾಬ್ದಾರಿ ಅರಿತು ಮುನ್ನಡೆದರೆ ಖಂಡಿತಾ ಅವರೇ ಪಕ್ಷದ ಕ್ವೀನ್ ಆಗಲಿದ್ದಾರೆ ಎಂದು ಶಿವಸೇನೆ ಹೇಳಿದೆ.

ಈ ಬಗ್ಗೆ ತನ್ನ ಮುಖವಾಣಿ ‘ಸಾಮ್ನಾ’ದಲ್ಲಿ ಲೇಖನ ಬರೆದಿರುವ ಶಿವಸೇನೆ, ಸಕ್ರಿಯ ರಾಜಕಾರಣಕ್ಕೆ ಪ್ರಿಯಾಂಕಾ ಆಗಮನದ ಮೂಲಕ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಗೆ ಆನೆ ಬಲ ಬಂದಂತಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ರಾಹುಲ್ ಪ್ರಿಯಾಂಕರನ್ನು ಸಕ್ರಿಯ ರಾಜಕಾರಣಕ್ಕೆ ತರುವ ಮೂಲಕ ಮುಂಬರುವ ಲೋಕಸಭಾ ಚುನಾವಣೆಯ ಗೆಲುವಿಗಾಗಿ ಬೇಕಾದ ಎಲ್ಲಾ ರೀತಿಯ ತಂತ್ರಗಾರಿಕೆಯನ್ನೂ ಮಾಡುತ್ತಿದ್ದಾರೆ. ರಾಜಕೀಯದಲ್ಲಿ ರಾಹುಲ್ ಪಕ್ವವಾಗುತ್ತಿದ್ದು, ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಉತ್ತಮವಾಗಿ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

ಫ್ರೆಶ್ ನ್ಯೂಸ್

Latest Posts

Featured Videos