ಇಂದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ

ಇಂದು ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಎಂಟ್ರಿ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣಾ ಅಖಾಡಕ್ಕೆ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರವೇಶ ಮಾಡಲಿದ್ದು, ಕರ್ನಾಟಕ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಿಯಾಂಕ ಗಾಂಧಿ ಎಂಟ್ರಿ ಕೊಡಲಿದ್ದಾರೆ. ರಾಹುಲ್ ಗಾಂಧಿ ಪ್ರಚಾರ ಮಾಡಿ ಹೋದ ಬೆನ್ನಲ್ಲೇ ಪ್ರಿಯಾಂಕ ಗಾಂಧಿ ರಾಜ್ಯಕ್ಕೆ ಎಂಟ್ರಿ ಕೊಡಲಿದ್ದಾರೆ. ಚುನಾವಣೆ ಘೋಷಣೆ ಬಳಿಕ ಮೊದಲ ಬಾರಿಗೆ ರಾಜ್ಯಕ್ಕೆ ಪ್ರಿಯಾಂಕಾ ಗಾಂಧಿ ಆಗಮಿಸುತ್ತಿದ್ದಾರೆ.

ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಪರ ಮತಯಾಚನೆ ಮಾಡಲಿದ್ದಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಒಂದೇ ದಿನ ಚಿತ್ರದುರ್ಗ ಹಾಗೂ ಬೆಂಗಳೂರಿನಲ್ಲಿ ಪ್ರಚಾರ ಮಾಡಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos