ಪಾಕ್ ಪರ ಘೋಷಣೆ ಬಂಧನಕ್ಕೆ ಆಗ್ರಹ

  • In State
  • January 5, 2021
  • 229 Views
ಪಾಕ್ ಪರ ಘೋಷಣೆ ಬಂಧನಕ್ಕೆ ಆಗ್ರಹ

ಚಾಮರಾಜನಗರ: ಪಾಕಿಸ್ತಾನದ ಪರ ಘೋಷಣೆ ಕೂಗಿದ ನೈಜ ಆರೋಪಿಯನ್ನು ಬಂಧಿಸಿ ಅಮಾಯಕರನ್ನು ಬಿಡುಗಡೆಗೊಳಿಸಿ, ಕೇಸ್ ವಾಪಸ್ ಪಡೆಯುವಂತೆ ಆಗ್ರಹಿಸಿ, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಜಿಲ್ಲಾ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಯಿತು.
ನಗರದ ಲಾರಿ ನಿಲ್ದಾಣದಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಎನ್.ಖಲೀಲ್‌ಉಲ್ಲಾ ಅವರ ನೇತೃತ್ವದಲ್ಲಿ ಸಮಾವೇಶಗೊಂಡ ಪ್ರತಿಭಟನಾನಿತರರು ಅಲ್ಲಿಂದ ಮೆರವಣಿಗೆ ಹೊರಟು ಡಿವೆಯೇಷನ್ ರಸ್ತೆ, ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿರಸ್ತೆ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ ಹೆಚ್ಚುವರಿ ಜಿಲ್ಲಾಧಿಕಾರಿ ಆನಂದ್ ರವರಿಗೆ ಮನವಿ ಸಲ್ಲಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos