ಮದ್ಯ ಮಾರಾಟ ನಿಷೇಧ

ಮದ್ಯ ಮಾರಾಟ ನಿಷೇಧ

ಬೆಂಗಳೂರು, ನ. 6: ನಗರದಾದ್ಯಂತ ಮುಸ್ಲಿಮರು ಈದ್ ಮಿಲಾದ್ ಹಬ್ಬ ಆಚರಣೆಯ ಹಿನ್ನೆಲೆಯಲ್ಲಿ ನ.1೦ರಂದು ಆಚರಿಸುವ ಪ್ರಯುಕ್ತ ಅಂದು ಮದ್ಯ ಮಾರಾಟ ನಿಷೇಧಿಸಲಾಗಿದೆ.

ಮಸೀದಿಗಳಲ್ಲಿ ಪ್ರಾರ್ಥನೆ ಮುಗಿಸಿ ನಂತರ ಮೆರವಣಿಗೆಯಲ್ಲಿ ಸ್ತಬ್ಧ ಚಿತ್ರಗಳು, ಧ್ವನಿವರ್ಧಕಗಳನ್ನು ಉಪಯೋಗಿಸಿಕೊಂಡು ಆಯುಧ ಹಾಗೂ ಇನ್ನಿತರೆ ವಸ್ತುಗಳನ್ನು ಪ್ರದರ್ಶಿಸಿ ಕುಣಿಯುತ್ತ ರಸ್ತೆಗಳಲ್ಲಿ, ವಾಹನಗಳಲ್ಲಿ, ನಡಿಗೆಯಲ್ಲಿ, ವೈಎಂಸಿಎ ಮೈದಾನ ಹಾಗೂ ನಗರದ ಇತರೆ ಮೈದಾನಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.

ಮೆರವಣಿಗೆಯಲ್ಲಿ ಹೆಚ್ಚಿನ ಜನರು ಭಾಗವಹಿಸಲಿದ್ದು, ಮೆರವಣಿಗೆ ನಡೆಯುವ ಸಮಯದಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಿಡಿಗೇಡಿ ಕೃತ್ಯಗಳನ್ನೆಸಗಿ ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗವನ್ನುಂಟುಮಾಡುವ ಸದ್ಯತೆ ಇರುವ ಮಾಹಿತಿ ಮೇರೆಗೆ ಅಂದು ಮದ್ಯಮಾರಾಟ ನಿಷೇಧಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗದAತೆ ಅಹಿತಕರ ಘಟನೆಗಳನ್ನು ತಡೆಯುವ ಆವಶ್ಯಕತೆ ಇರುವುದರಿಂದ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಮದ್ಯಪಾನ ಮಾರಾಟವನ್ನು ನಿಷೇಧಿಸುವುದು ಸೂಕ್ತವೆಂದು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ನ.1೦ರ ಬೆಳಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ ಎಲ್ಲ ರೀತಿಯ ಬಾರ್‌ಗಳು, ವೈನ್‌ಶಾಪ್‌ಗಳು, ಪಬ್‌ಳು ಹಾಗೂ ಎಲ್ಲ ರೀತಿಯ ಮದ್ಯ ಮಾರಾಟ ಮಾಡುವ ಅಂಗಡಿಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟವನ್ನು ಮಾಡದಿರಲು ನಿಷೇಧಾಜ್ಞೆ ವಿಧಿಸಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos