ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಇಂದು ಕಾಂಗ್ರೆಸ್ ನಾಯಕರು ವಿಧಾನಸೌಧದಲ್ಲಿ ಪ್ರತಿಭಟನೆ ನಡೆಸಿದರು.
ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ರಾಜಭವನ ಚಲೋ ಪ್ರತಿಭಟನೆ ನಡೆಸಿದ ನಂತರ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಇನ್ನೂ ಹಲವಾರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಬೇಕೆಂದು ಇಂದು (ಶನಿವಾರ ಆಗಸ್ಟ್ 31) ರಂದು ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ: ರಾಜ್ಯಪಾಲರ ವಿರುದ್ದ ಕಾಂಗ್ರೆಸ್ ನಾಯಕರ ಪ್ರತಿಭಟನೆ
ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್ ಅವರು, ರಾಜ್ಯಪಾಲರ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿರುವುದನ್ನು ಪ್ರತಿಭಟಿಸಿ ಕಾಂಗ್ರೆಸ್ ಪಕ್ಷವು ‘ರಾಜಭವನ ಚಲೋ’ ಹಮ್ಮಿಕೊಂಡಿದೆ ಎಂದರು.
ರಾಜಭವನ ರಾಜಕೀಯ ಪಕ್ಷದ ಕಚೇರಿಯಾಗಬಾರದು ಎಂಬ ಉದ್ದೇಶದಿಂದ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ನಾವು ‘ರಾಜಭವನ ಚಲೋ’ ಹಮ್ಮಿಕೊಂಡಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಅಲ್ಲ. ಈ ವಿಷಯ ನ್ಯಾಯಾಲಯದಲ್ಲಿದೆ ಎಂದು ಸ್ಪಷ್ಟಪಡಿಸಲು ಬಯಸುತ್ತೇನೆ’ ಎಂದರು.