ನಾಳೆ ದೆಹಲಿಯ ಜಂತರ್ ಮಂತರ್​ನಲ್ಲಿ ಕೈ ಶಾಸಕರ ಪ್ರತಿಭಟನೆ!

ನಾಳೆ ದೆಹಲಿಯ ಜಂತರ್ ಮಂತರ್​ನಲ್ಲಿ ಕೈ ಶಾಸಕರ ಪ್ರತಿಭಟನೆ!

ಬೆಂಗಳೂರು: ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕೇಂದ್ರದ ಗಮನ ಸೆಳೆಯಲು, ನಮ್ಮ ಪಾಲಿನ ಅನುದಾನದ ಬಗ್ಗೆ ಜನರಿಗೆ ಮನದಟ್ಟು ಮಾಡಲು ರಾಜ್ಯ ಸರ್ಕಾರ ದೆಹಲಿಯಲ್ಲಿ ಹೋರಾಟ ನಡೆಯಲಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಅನುದಾನ ತಾರತಮ್ಯದ ವಿರುದ್ಧದ ಕರ್ನಾಟಕ ಕಾಂಗ್ರೆಸ್​ ಸರ್ಕಾರ ಸಮರ ಸಾರಿದ್ದು, ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಕಾಂಗ್ರೆಸ್ ಶಾಸಕರು ಹಾಗೂ ಸಚಿವರು ನಾಳೆ ಅಂದರೆ ಫೆಬ್ರವರಿ 7 ರಂದು ದೆಹಲಿಯ ಜಂತರ್ ಮಂತರ್​ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದಾಖಲೆಗಳ ಮೂಲಕವೇ ಗುದ್ದು ಕೊಟ್ಟಿದ್ದಾರೆ. ಕೇಂದ್ರದ ಅನುದಾನ ತಾರತಮ್ಯ ಮಾಡ್ತಿದೆ. ಕರ್ನಾಟಕಕ್ಕೆ ಅನ್ಯಾಯ ಮಾಡಿದೆ ಅಂತಾ ಆರೋಪಗಳ ಚಾರ್ಜ್​ಶೀಟ್ ಬಿಡುಗಡೆ ಮಾಡಿದ್ದಾರೆ. ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಬಿಟ್ರೆ ಕರ್ನಾಟಕವೇ ಎರಡನೇ ಸ್ಥಾನದಲ್ಲಿದೆ. ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ಹಣ ಹೋಗುತ್ತೆ. ಆದ್ರೆ ರಾಜ್ಯಕ್ಕೆ ಬರೋ ತೆರಿಗೆ ಹಣದಲ್ಲಿ ಸುಮಾರು 62 ಸಾವಿರದ 98 ಕೋಟಿ ಕಡಿಮೆ ಆಗಿದೆ ಎಂದಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos