ತೆರಿಗೆ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ತೆರಿಗೆ ಹೆಚ್ಚಳ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ತೆರಿಗೆ ಹೆಚ್ಚಿಸಿ ದರ್ಪ ತೋರುತ್ತಿರುವ ಬಿಜೆಪಿ, ಬಡವರ ರಕ್ತ ಹೀರುತ್ತಿರುವ ಸರ್ಕಾರ, ಗಾಯದ ಮೇಲೆ ಬರೆ ಎಳೆಯುತ್ತಿರುವ ಬಿಜೆಪಿ, ವಿದ್ಯುತ್ ದರ ಹೆಚ್ಚಳ, ಯಾರ ಉದ್ಧಾರಕ್ಕೆ ಆಸ್ತಿ ತೆರಿಗೆ ಹೆಚ್ಚಳ…

ಈ ಎಲ್ಲಾ ಪ್ರತಿಭಟನೆಯ ಕೂಗು ಕೇಳಿಬಂದಿದ್ದು, ಆನಂದ ರಾವ್ ವೃತ್ತ, ಮೌರ್ಯ ಹೋಟೆಲ್ ಎದುರಿನ ಮಹಾತ್ಮಾ ಗಾಂಧೀ ಪ್ರತಿಮೆ ಬಳಿ.

ಆರ್ಥಿಕ ಸಂಕಷ್ಟದ ಸಮಯದಲ್ಲಿಯೂ ಬಿಜೆಪಿ ಸರ್ಕಾರ ವಿದ್ಯುತ್ ಏರಿಕೆ, ಆಸ್ತಿ ತೆರಿಗೆ, ನೀರಿನ ದರ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಬೆಂಗಳೂರು ಕೇಂದ್ರ, ದಕ್ಷಿಣ ಮತ್ತು ಉತ್ತರ ಜಿಲ್ಲಾ ಕಾಂಗ್ರೆಸ್ ಸಮಿತಿ ಜಂಟಿಯಾಗಿ ಪ್ರತಿಭಟನೆ ಕೈಗೊಂಡು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರು, ಕಾರ್ಯಾಧ್ಯಕ್ಷರು, ಸಂಸದರು, ಮಾಜಿ ಸಂಸದರು, ಶಾಸಕರು, ಜಿಲ್ಲಾ ಅಧ್ಯಕ್ಷರು, ಬಿಬಿಎಂಪಿ ಸದಸ್ಯರು ಸೇರಿದಂತೆ ಹಲವರು ಭಾಗವಹಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos