ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

  • In State
  • February 22, 2021
  • 281 Views
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಪಾವಗಡ: ಸಿ.ಪಿ.ಐ. ಪಕ್ಷದ ವತಿಯಿಂದ ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಆಗ್ರಹಿಸಿ ಬರದ ನಾಡಲ್ಲಿ ಭರವಸೆಯ ಹೆಜ್ಜೆ ಎಂಬ ಶೀರ್ಷಿಕೆಯಡಿಯಲ್ಲಿ ಕಾಲ್ನಡಿಗೆ ಜಾಥಾ ಮೂಲಕ ತೆರಳಿ ಸೋಮವಾರ ಪಟ್ಟಣದ ತಹಶೀಲ್ದಾರ್ ಕಛೇರಿಗೆ ಮುತ್ತಿಗೆ ಹಾಕಿ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದ ಘಟನೆ ನಡೆಯಿತು.
ಪ್ರತಿಭಟನೆ ನೇತೃತ್ವ ವಹಿಸಿ ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಮಾತನಾಡಿ, ಕೃಷಿ ಮತ್ತು ಕೃಷಿಯೇತರ ಕ್ಷೇತ್ರದಲ್ಲಿ ಕೈಗಾರಿಕೆ ಸ್ಥಾಪನೆಗೆ ಸರ್ಕಾರ ಕ್ರಮ ಕೈಗೊಂಡು ತಾಲ್ಲೂಕಿನಲ್ಲಿ ಉದ್ಯೋಗ ಸೃಷ್ಟಿಗೆ ಮುಂದಾಗಬೇಕು. ಎಸ್.ಸಿ, ಎಸ್.ಟಿ. ಉಪ ಯೋಜನೆಯಲ್ಲಿ ಲಭ್ಯವಿರುವ ಕೋಟ್ಯಾಂತರ ರೂಪಾಯಿ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ತಾಲ್ಲೂಕಿನ ಎಸ್.ಸಿ, ಎಸ್.ಟಿ ವರ್ಗದ ಜನ ವಾಸಿಸುವ ಪ್ರದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿ ಮತ್ತು ಆರ್ಥಿಕ, ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಒತ್ತು ಕೊಡಬೇಕು. ಫ್ಲೋರೈಡ್ ಬಾಧಿತ ವ್ಯಕ್ತಿಗಳನ್ನು ಗುರ್ತಿಸಿ ಅವರಿಗೆ ಚಿಕಿತ್ಸೆ ಮತ್ತು ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ನಿವೇಶನ ರಹಿತರ ಪಟ್ಟಿ ಮಾಡಿ ಅವರಿಗೆ ನಿವೇಶನ ಮಂಜೂರು ಮಾಡಿ ವಸತಿ ವ್ಯವಸ್ಥೆ ಕಲ್ಪಿಸಬೇಕು. ಅಂತರ್ಜಲ ಅಭಿವೃದ್ಧಿ ಕಾರ್ಯಕ್ರಮಗಳಿಗೆ ವಿಶೇಷ ಅನುದಾನ ಬಿಡುಗಡೆ ಮಾಡಬೇಕು. ಉದ್ಯೋಗ ಖಾತರಿ ಯೋಜನೆಯಲ್ಲಿ ಕನಿಷ್ಠ 250 ದಿನಗಳ ಉದ್ಯೋಗ ಸೃಷ್ಟಿಸಬೇಕು. ತಾಲ್ಲೂಕಿನಲ್ಲಿ ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಘೋಷಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos