ಬೆಂಗಳೂರು, ಅ. 16 : ರೌಡಿಗಳಿಗೆ ಸಿಂಹಸ್ವಪ್ನವಾಗಿದ ಅಲೋಕ್ ಕುಮಾರ್, ಗಿರೀಶ್ ರಂತಹ ಅಧಿಕಾರಿಗಳು ಎತ್ತಂಗಡಿ ಹಿನ್ನಲೆ ರೌಡಿಗಳು ಕಮಿಷನರ್ ಗೆ ಸನ್ಮಾನ ಮಾಡೋವಷ್ಟು ಬೆಳೆದು ಫುಲ್ ಕ್ಲೋಸ್ ಆಗಿ ಬಿಟ್ಟಿದ್ದಾರೆ. ಇದು ಜನರು ಆಕ್ರೋಶಕ್ಕೆ ಕಾರಣ. ರೌಡಿಗಳು ಪೊಲೀಸ್ ರಿಗೆ ಫುಲ್ ಕ್ಲೋಸ್ ಆಗಿ ಸದ್ಯ ಶ್ರೀ ರಾಮಸೇನೆಯಲ್ಲಿ ಗುರುತಿಸಿಕೊಂಡಿರುವ ಯಶಸ್ವಿನಿ ರೌಡಿ ಯಶಸ್ವಿನಿ ಬೆಂಗಳೂರು ಪೊಲೀಸ್ ಕಮಿಷನರ್ ಭಾಸ್ಕರ್ ರಾವ್‍ಗೆ ಸನ್ಮಾನ ಮಾಡಿದ್ದಾರೆ. ಈಗ ಕಮಿಷನರ್ ಗೆ ಸನ್ಮಾನ ಮಾಡಿದ ಫೊಟೊಗಳು ವೈರಲ್ ಆಗಿದೆ. ಇದು ರೌಡಿಗಳಿಂದ ಸನ್ಮಾನ ಮಾಡಿಸಿಕೊಂಡ ಕಮಿಷನರ್ ಭಾಸ್ಕರ್ ರಾವ್ ನಡೆಗೆಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಮೀಟರ್ ಬಡ್ಡಿ ದುಡ್ಡಿಗೆ ಅಮಾಯಕರ ಪ್ರಾಣ ತೆಗೆದಿದ್ದು, ಹಣ ಕೊಡಲಿಲ್ಲ ಅಂದರೆ ಚಪ್ಪಲಿ ಕಾಲಿನಲ್ಲೇ ಒದೀತಿದ್ದಾಕೆ ಇದೀಗ ಸಾಮಾಜಿಕ ಕಾರ್ಯಕರ್ತೆ ವೇಷ ಹಾಕಿ ಕಮಿಷನರ್ ಅವರಿಗೇ ಸನ್ಮಾನ ಮಾಡಿರುವುದು ಬೆಳಕಿಗೆ ಬಂದಿದೆ.
ಶ್ರೀರಾಮಸೇನೆಯ ಮುತಾಲಿಕ್ ಜೊತೆ ನಿಂತು ಭಾಸ್ಕರ್ ರಾವ್ ಅವರಿಗೆ ಶಾಲು ಹೊದಿಸಿ, ಗಂಧದ ಹಾರ ಹಾಕಿದ್ದಾರೆ. ಯಶಸ್ವಿನಿ ಮತ್ತು ಈಕೆಯ ಪತಿ ದಡಿಯಾ ಮಹೇಶ್ ಅವರ ಸನ್ಮಾನವನ್ನು ನಗುಮೊಗದಿಂದಲೇ ಭಾಸ್ಕರ್ ರಾವ್ ಸ್ವೀಕರಿಸಿದ್ದಾರೆ.