ಅತ್ಯಾಚಾರಿಗಳಿಗೆ ಶಿಕ್ಷೆಯಾಗಲಿ: ಮಾಧುಸ್ವಾವಿ

ಅತ್ಯಾಚಾರಿಗಳಿಗೆ ಶಿಕ್ಷೆಯಾಗಲಿ: ಮಾಧುಸ್ವಾವಿ

ತುಮಕೂರು, ಡಿ. 6 : ಅತ್ಯಾಚಾರಿಗಳಿಗೆ ತಕ್ಷಣ ಶಿಕ್ಷೆಯಾಗುವ ಸ್ಥಿತಿ ತರದೇ ಹೋದರೆ ಕಷ್ಟವಾಗಲಿದೆ. ಹಾಗಾಗಿ ಕೆಲ ಕಾನೂನು ತಿದ್ದುಪಡಿ ಮಾಡುವಂತೆ ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಹೈದರಾಬಾದ್ ಎನ್ ಕೌಂಟರ್ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ. ಆದರೆ ನಮ್ಮ ಕಾನೂನಿನಲ್ಲೇ ಕೆಲ ತಿದ್ದುಪಡಿಯಾಗಬೇಕು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಐಪಿಸಿ ಕಾಯಿದೆ ಕೇಂದ್ರ ಸರ್ಕಾರ ತಿದ್ದುಪಡಿ ಮಾಡಬೇಕಿದ್ದು, ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos