ಮೋದಿ ಪ್ರಮಾಣ ವಚನಕ್ಕೆ ‘ಪುಟಿನ್‍’ ಆಗಮನ..!

ಮೋದಿ ಪ್ರಮಾಣ ವಚನಕ್ಕೆ ‘ಪುಟಿನ್‍’ ಆಗಮನ..!

ನವದೆಹಲಿ,ಮೇ.23, ನ್ಯೂಸ್‍ ಎಕ್ಸ್ ಪ್ರೆಸ್‍: ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದೆ. ಸಮೀಕ್ಷೆಗಳ ಲೆಕ್ಕಾಚಾರ ಪಕ್ಕಾ ಆಗಿದೆ ಬಿಜೆಪಿ ಸ್ಪಷ್ಟಬಹುತ ಸಿಕ್ಕಿದ್ದು, ಮೋದಿ ಕೊರಳಿಗೆ ವಿಜಯಮಾಲೆ ಹಾಕುವ ಸಮಯ ಸನ್ನಿಹಿತವಾಗಿದೆ ನರೇಂದ್ರ ಮೋದಿ ಮೇ 26ರಂದು ಸಂಜೆ ರಾಜಧಾನಿ ದೆಹಲಿಯಲ್ಲಿ ಎರಡನೇ ಬಾರಿ ಪ್ರಧಾನಿ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಳೆ ಬಿಜೆಪಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡಿಸಲಿದೆ.

ಪ್ರಮಾಣವಚನ ಸಮಾರಂಭಕ್ಕೆ ‘ಪುಟಿನ್‍’ ಆಗಮನ..!

ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸಮಾರಂಭಕ್ಕೆ ಗಣ್ಯಾತಿಗಣ್ಯರು ಪಾಲ್ಗೊಳ್ಳಲಿದ್ದಾರೆ. ಸಮಾರಂಭಕ್ಕೆ ವಿಶೇಷ ಅತಿಥಿಯಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್‌ ಅವರಿಗೆ ಆಹ್ವಾನ ನೀಡಲಾಗಿದೆ. ಇದಕ್ಕೆ ಪುಟಿನ್‌ ಕೂಡಾ ಸಮ್ಮತಿಸಿದ್ದಾರೆ ಎನ್ನಲಾಗಿದೆ.

ಯಾರಿಗೆ ಒಲಿಯಲಿದೆ ಸಚಿವಸ್ಥಾನ?

ಇದಕ್ಕೂ ಮುನ್ನ ಬಿಜೆಪಿ ಸಂಸದೀಯ ಪಕ್ಷದ ನಾಯಕರನ್ನಾಗಿ ಮೋದಿಯವರನ್ನು ಆಯ್ಕೆ ಮಾಡಲಾಗುತ್ತದೆ. ಸರ್ಕಾರ ರಚಿಸಲು ರಾಷ್ಟ್ರಪತಿ ಆಹ್ವಾನ ನೀಡಿದ ನಂತರ ಮುಂದಿನ ಪ್ರಕ್ರಿಯೆ ನಡೆಯಲಿದ್ದು, ಮೇ 26ರಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಷ್ಟ್ರಪತಿ ಕೋವಿಂದ್ ಪ್ರಮಾಣ ವಚನ ಬೋಧಿಸಲಿದ್ದಾರೆ.ಇದೇ ಸಂದರ್ಭದಲ್ಲಿ ಕೆಲವು ಹಿರಿಯ ಮುಖಂಡರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆಯಿದೆ.

ಫ್ರೆಶ್ ನ್ಯೂಸ್

Latest Posts

Featured Videos