ಪುತ್ರನ ಗೆಲುವಿಗಾಗಿ ಸಿಎಂ ಮಿಡ್ ನೈಟ್ ಮೀಟಿಂಗ್.!

ಪುತ್ರನ ಗೆಲುವಿಗಾಗಿ ಸಿಎಂ ಮಿಡ್ ನೈಟ್ ಮೀಟಿಂಗ್.!

ಮಂಡ್ಯ, ಏ. 11, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ಚುನಾವಣಾ ಕಾರ್ಯತಂತ್ರಗಳನ್ನು ಹೆಣೆಯಲು ಸರಣಿ ಸಭೆಗಳು ನಡೆದಿವೆ.

ಕೆಆರ್‍ಎಸ್‍ನ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಡರಾತ್ರಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿದ್ದರಾಮೇಗೌಡ ಸೇರಿದಂತೆ ಇನ್ನಿತರ ಸ್ಥಳೀಯ ಮುಖಂಡರ ಜೊತೆ ಮಾತುಕತೆ ನಡೆಸಿದ್ದಾರೆ.

ಇಂದು ಬೆಳಗ್ಗೆಯೂ ಕೂಡ ಜಿಲ್ಲೆಯ ಶಾಸಕರಾದ ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ನಾರಾಯಣಗೌಡ, ಅನ್ನದಾನಿ, ಎಂ.ಶ್ರೀನಿವಾಸ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.ಚುನಾವಣೆಗೆ ಕೇವಲ 7 ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಚುನಾವಣಾ ಕಾರ್ಯತಂತ್ರದ ಬಗ್ಗೆ ದೀರ್ಘ ಸಮಾಲೋಚನೆ ನಡೆಸಲಾಗುತ್ತಿದೆ.

 

ಫ್ರೆಶ್ ನ್ಯೂಸ್

Latest Posts

Featured Videos