ಸಚಿವ ಪುಟ್ಟರಂಗಶೆಟ್ಟಿಗೆ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಯತ್ನ: ಬಿಜೆಪಿ ಕಾರ್ಯಕರ್ತರ ಬಂಧನ

ಸಚಿವ ಪುಟ್ಟರಂಗಶೆಟ್ಟಿಗೆ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಯತ್ನ: ಬಿಜೆಪಿ ಕಾರ್ಯಕರ್ತರ ಬಂಧನ

ಚಾಮರಾಜನಗರ: ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವರಿಂದ ಧ್ವಜಾರೋಹಣ ಬೇಡ ಎಂದು ಬಿಜೆಪಿ ಕಾರ್ಯಕರ್ತರು ಸಚಿವ ಪುಟ್ಟರಂಗಶೆಟ್ಟಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಚಾಮರಾಜನಗರದ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸಚಿವ ಪುಟ್ಟರಂಗ ಶೆಟ್ಟಿ ವಿರುದ್ಧ ಕಪ್ಪು ಬಟ್ಟೆ ಪ್ರದರ್ಶನಕ್ಕೆ ಮುಂದಾದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ವಿಧಾನಸೌಧದಲ್ಲಿ ಹಣ ಸಿಕ್ಕ ಪ್ರಕರಣದ ಆರೋಪಿ ಸಚಿವ ಪುಟ್ಟರಂಗಶೆಟ್ಟಿ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಬಂಧಿತ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಫ್ರೆಶ್ ನ್ಯೂಸ್

Latest Posts

Featured Videos