ಪಿಡಬ್ಲ್ಯೂಡಿ ಮಹತ್ವದ ನಿರ್ಧಾರ, ಗುತ್ತಿಗೆದಾರರಿಂದಲೇ 5 ವರ್ಷ ರಸ್ತೆ ನಿರ್ವಹಣೆ ಘೋಷಣೆ.

ಪಿಡಬ್ಲ್ಯೂಡಿ ಮಹತ್ವದ ನಿರ್ಧಾರ, ಗುತ್ತಿಗೆದಾರರಿಂದಲೇ 5 ವರ್ಷ ರಸ್ತೆ ನಿರ್ವಹಣೆ ಘೋಷಣೆ.

ಬೆಂಗಳೂರು: ಮುಂದಿನ ದಿನಗಳಲ್ಲಿ ಕಳಪೆ ಕಾಮಗಾರಿ ಮಾಡುವ ಗುತ್ತಿಗೆದಾರರಿಗೆ ಬಿಸಿ ಮುಟ್ಟಿಸುವ ನಿರ್ಧಾರ ಪಿಡಬ್ಲ್ಯೂಡಿ ಕೈಗೊಂಡಿದೆ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗಾರರ ಜೊತೆ ಮಾತನಾಡಿ ಇನ್ನು ಮುಂದೆ ನಮ್ಮ ರಾಜ್ಯದ ರಸ್ತೆಗಳನ್ನು ನಿರ್ಮಾಣ ಮಾಡಿದ ಗುತ್ತಿಗೆದಾರರೇ ಐದು ವರ್ಷದವರೆಗೆ ನಿರ್ವಹಣೆ ಮಾಡಬೇಕು ಎಂಬ ಹೊಸ ನಿಯಮವನ್ನು ಜಾರಿಗೆ ತರುತ್ತಿದ್ದೇವೆ. ರಸ್ತೆ ಅಭಿವೃದ್ಧಿ ಮಾಡಿದ ಗೊತ್ತಿಗೆದಾರರಿಗೆ ಟೆಂಡರ್ ಅಗ್ರಿಮೆಂಟ್ ಪ್ರಕಾರ ನಿರ್ವಹಣೆ ಮಾಡುವ ಹೊಣೆ ಗುತ್ತಿಗೆದಾರರಿಗೆ ನೀಡಲಾಗುವುದು. ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಇಲಾಖೆಯಲ್ಲಿ ಸುಧಾರಣೆ ‌ಮಾಡುವುದಕ್ಕೆ ಈ ನಿರ್ಧಾರ ಕೈಗೊಂಡಿದ್ದೇವೆ.
ರಾಜ್ಯದಲ್ಲಿ ರಸ್ತೆ ಅಭಿವೃದ್ಧಿ ಮಾಡುವಾಗ ಕಳಪೆಯಾಗಿ ಮಾಡುತ್ತಾರೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಇನ್ನು ಮುಂದೆ ರಸ್ತೆಗಳನ್ನು ಅಭಿವೃದ್ಧಿ ಮಾಡಿದ ಗುತ್ತಿಗೆದಾರರಿಂದಲೇ 5 ವರ್ಷಗಳ ಕಾಲ ತಾವು ಅಭಿವೃದ್ಧಿ ಮಾಡಿದ ರಸ್ತೆಗಳನ್ನು ಅವರೇ ನಿರ್ವಹಣೆ ಮಾಡಬೇಕು.
ರಾಜ್ಯದಲ್ಲಿ ಇಲ್ಲಿಯವರೆಗೆ ಈ ನಿಯಮ ಜಾರಿಯಲ್ಲಿರಲಿಲ್ಲ. ಈಗ ಹೊಸದಾಗಿ ಈ ನಿಯಮ ಜಾರಿ ಮಾಡುತ್ತಾ ಇದ್ದೇವೆ. ಹಾಗಾಗಿ, ರಸ್ತೆಗಳ ನಿರ್ವಹಣೆಗಾಗಿ ಇನ್ನುಮುಂದೆ ಟೆಂಡರ್ ಕರೆಯುವ ಅವಶ್ಯಕತೆಯೂ ಇರುವುದಿಲ್ಲ. ಆದಾಯ ಬರುವ ಕಡೆ ಇನ್ವೆಸ್ಟ್ ಮಾಡಲು ಅವಕಾಶ ಇದೆ ಎಂದು ಅವರು ಹೇಳಿದರು.

ವರದಿಗಾರ
ಎ ಚಿದಾನಂದ

ಫ್ರೆಶ್ ನ್ಯೂಸ್

Latest Posts

Featured Videos