ಬೆಂಗಳೂರು: ಹುಬ್ಬಳ್ಳಿಯ ಕೆಎಸ್‌ಸಿಎ ಮೈದಾನದಲ್ಲಿ ನಡೆದ ಚಂಡೀಗಢ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಂಡಿರುವ ಕರ್ನಾಟಕ ತಂಡ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕ್ವಾರ್ಟರ್ ಫೈನಲ್‌ಗೆ ಲಗ್ಗೆಯಿಟ್ಟಿದೆ.
ದಶಕದ ಬಳಿಕ ರಣಜಿ ಟ್ರೋಫಿ ಎತ್ತಿ ಹಿಡಿಯುವ ನಿರೀಕ್ಷೆಯೊಂದಿಗೆ ಈ ಬಾರಿ ಟೂರ್ನಿಯಲ್ಲಿ ಕಣಕ್ಕಿಳಿದಿರುವ ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ ಪ್ರವೇಶಿಸಿದೆ. ನಿರ್ಣಾಯಕ ಪಂದ್ಯದಲ್ಲಿ ಚಂಡೀಗಢ ವಿರುದ್ಧ ರಾಜ್ಯ ತಂಡ ಡ್ರಾ ಸಾಧಿಸಿದರೂ ಮೊದಲ ಇನ್ನಿಂಗ್ಸ್ ಮುನ್ನಡೆ ಆಧಾರದಲ್ಲಿ 3 ಅಂಕ ಸಂಪಾದಿಸಿ ನಾಕೌಟ್ ಸ್ಥಾನ ಖಚಿತಪಡಿಸಿಕೊಂಡಿತು.
ರಾಜ್ಯ ತಂಡಕ್ಕೆ ಕ್ವಾರ್ಟರ್‌ಗೇರಬೇಕಿದ್ದರೆ ಈ ಪಂದ್ಯದಲ್ಲಿ ಗೆಲ್ಲಬೇಕಿತ್ತು ಅಥವಾ ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆದು ಡ್ರಾ ಸಾಧಿಸಬೇಕಿತ್ತು. ಒಟ್ಟು 7 ಪಂದ್ಯಗಳಲ್ಲಿ 27 ಅಂಕ ಸಂಪಾದಿಸಿದ ಕರ್ನಾಟಕ ಗುಂಪಿನಲ್ಲಿ 2ನೇ ಸ್ಥಾನಿಯಾದರೆ, ತಮಿಳುನಾಡು 28 ಅಂಕದೊಂದಿಗೆ ಅಗ್ರಸ್ಥಾನಿಯಾಗಿ ಕ್ವಾರ್ಟರ್‌ಗೇರಿತು.