ಕಾಂಗ್ರೆಸ್‌ ಸರ್ಕಾರದ ವಿರುದ್ದ ಆರ್ ಅಶೋಕ್ ಗಂಭೀರ ಆರೋಪ

ಕಾಂಗ್ರೆಸ್‌ ಸರ್ಕಾರದ ವಿರುದ್ದ ಆರ್ ಅಶೋಕ್ ಗಂಭೀರ ಆರೋಪ

ಬೆಂಗಳೂರು: ಅಲ್ಪಸಂಖ್ಯಾತರ ಮೇಲೆ ಆರೋಪ ಬಂದರೆ ಪ್ರಕರಣ ಮುಚ್ಚಿಹಾಕಿ, ಬಹುಸಂಖ್ಯಾತರ ಮೇಲೆ ಆರೋಪ ಬಂದರೆ ಕೂಡಲೇ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ರಾಜ್ಯ ಸರ್ಕಾರದಿಂದ ಸ್ಪಷ್ಟ ನಿರ್ದೇಶನವಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್, ಕರ್ನಾಟಕದ ಪ್ರಜೆಯಾಗಿ ಇದೆಲ್ಲಾ ನಮ್ಮ ಮನಸ್ಸಿಗೆ ಬೇಸರ ತಂದಿದೆ ಎಂದು ಕಳವಳವ್ಯಕ್ತಪಡಿಸಿದರು.

ಈಗ ಕೇಳಿಬಂದಿರುವ ಎರಡೂ ಆರೋಪಗಳು ಸಾಬೀತಾದರೆ ಸರ್ಕಾರವನ್ನು ವಿಸರ್ಜನೆ ಮಾಡುತ್ತಾರೆಯೇ? ಎಂದು ಪ್ರಶ್ನಿಸಿದರು. ಎರಡೂ ಕಡೆ ನಡೆದಿರುವುದು ಭಯೋತ್ಪಾದನಾ ಘಟನೆಯಾದರೆ ಸರ್ಕಾರದ ಎಲ್ಲರೂ ರಾಜೀನಾಮೆ ಕೊಡ್ತಾರಾ? ಉದ್ಯಮ ಸಂಘರ್ಷದಿಂದ ದಾಳಿ ಎಂದಿದ್ದು ಯಾರು? ಎಂದು ಪ್ರಶ್ನಿಸಿದರು.

ಗೃಹಸಚಿವರು ಒತ್ತಡದಲ್ಲಿದ್ದಾರೆ. ಅವರು ಇದ್ದ ವರದಿಯನ್ನು ಇದ್ದಹಾಗೇ ಕೊಡುವವರು. ಅವರ ಮೇಲೆ ಒತ್ತಡವಿರುವುದು ಸತ್ಯ. ಹಾಗಾಗಿ ರಿಪೋರ್ಟ್ ಕೊಟ್ಟೇ ಇಲ್ಲ ಎಂದು ಹೇಳಿಬಿಡಿ ಎಂದು ಪೊಲೀಸರಿಗೆ ಹೇಳಿರುತ್ತಾರೆ. ನಾನೂ ಕೂಡ ಗೃಹ ಸಚಿವ ಆಗಿದ್ದವನು. ವರದಿಯಲ್ಲಿ ದಿನಾಂಕ ಹಾಕಿರ್ತಾರೆ. ಅವರು ಮ್ಯಾನೇಜ್ ಮಾಡುತ್ತಿದ್ದಾರೆ ಅಷ್ಟೇ ಎಂದರು.

ನಿಮ್ಮ ಮನಸ್ಥಿತಿಗೆ ನೊಬೆಲ್ ಪ್ರಶಸ್ತಿಯನ್ನೇ ಕೊಡಬೇಕು. ಗೃಹ ಸಚಿವರು ಈಗ ಯಾರದ್ದೋ ಹಿತಾಸಕ್ತಿಯ ಕೈವಾಡಕ್ಕೆ ಸಿಲುಕಿ ಒದ್ದಾಡುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos