ಕಾಂಗ್ರೆಸ್ ಸರ್ಕಾರದ ವಿರುದ್ದ ಆರ್‌ ಅಶೋಕ್‌ ವಾಗ್ದಾಳಿ

ಕಾಂಗ್ರೆಸ್ ಸರ್ಕಾರದ ವಿರುದ್ದ ಆರ್‌ ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಲೂಟಿ ಸರ್ಕಾರ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ  ವಾಗ್ದಾಳಿ ನಡೆಸಿದರು. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಭಾಷಣ ಮಾಡಿದ ನಂತರ ವಿಧಾನಸೌಧದಲ್ಲಿ ಆ ಬಗ್ಗೆ ಪ್ರತಿಕ್ರಿಯಿಸಿದ ಅಶೋಕ, ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಸರ್ಕಾರ ಮಾಡಿಲ್ಲ. ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಭಾಷಣದಲ್ಲಿ ಸುಳ್ಳು ಹೇಳಿಸಿದೆ ಎಂದರು.

ಕಾಂಗ್ರೆಸ್ ಸರ್ಕಾರ ಗೌರವಾನ್ವಿತ ರಾಜ್ಯಪಾಲರ ಬಾಯಲ್ಲಿ ಸುಳ್ಳುಗಳನ್ನು ಹೇಳಿಸಿದೆ ಹಿಂದಿನ ಬಿಜೆಪಿ ಸರ್ಕಾರ ತಂದ ಯೋಜನೆಗಳನ್ನು ಕೇಂದ್ರ ಸರ್ಕಾರದ ಯೋಜನೆಗಳನ್ನು ತಮ್ಮದೇ ಯೋಜನೆಗಳು ಎಂದು ಕಾಂಗ್ರೆಸ್ ಬಿಂಬಿಸಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿಯನ್ನು ನಡೆಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದವರು ಆರ್ ಅಶೋಕ್ 5 ಗ್ಯಾರಂಟಿ ತಂದಿದ್ದೇವೆ ಎಂದು ಹೇಳಿದರು ಯುವನಿಧಿ ಇನ್ನೂ ನಿರುದ್ಯೋಗಿಗಳ ಕೈ ಸೇರಿಲ್ಲ ಬರ ಪರಿಹಾರ ಕೊಟ್ಟಿದ್ದೇವೆ ಎನ್ನುತ್ತಾರೆ ಆದರೆ ಪರಿಹಾರವನ್ನು ಕಂತಾಗಿ ನೀಡಬಾರದು ಹಿಂದಿನ ಬಿಜೆಪಿ ಸರ್ಕಾರ ಪರಿಹಾರವನ್ನು ಒಂದೇ ಸಲಕ್ಕೆ ರೈತರ ಖಾತೆಗೆ ಹಾಕಿತ್ತು ಈ ಸರ್ಕಾರ ಕಂತು ಕಂತಾಗಿ ನೀಡುವುದು ನಾವು 25000 ಕೇಳಿದರೆ ಆ ವಿಷಯವನ್ನು ಪ್ರಸ್ತಾಪಿಸಿಲ್ಲ ಕೇವಲ ಕೇಂದ್ರ ಸರ್ಕಾರದ ಮೇಲೆ ಗೂಬೇ ಕೂರಿಸಲಾಗಿದೆ ಎಂದು ದೂರಿದರು. ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಕಾಪಾಡಿಲ್ಲ ಎಂದು ಆಕ್ರೋಶವನ್ನು ಹೊರಹಾಕಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos