ಯತೀಂದ್ರ ಸಿದ್ದರಾಮಯ್ಯ ಗೆ ಬುದ್ಧಿಭ್ರಮಣೆಯಾಗಿದೆ: ಆರ್‌ ಅಶೋಕ್

ಯತೀಂದ್ರ ಸಿದ್ದರಾಮಯ್ಯ ಗೆ ಬುದ್ಧಿಭ್ರಮಣೆಯಾಗಿದೆ: ಆರ್‌ ಅಶೋಕ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಮಗ ಎನ್ನುವ ಕಾರಣಕ್ಕೆ ಹಾಗೂ ರಾಷ್ಟ್ರ ನಾಯಕರ ಬಗ್ಗೆ ಮಾತನಾಡಿದರೆ ದೊಡ್ಡ ವ್ಯಕ್ತಿಯಾಗುತ್ತೇನೆ, ಇದರಿಂದ ಬೆಲೆ ಬರುತ್ತದೆ ಎನ್ನುವ ಕಾರಣಕ್ಕೆ ಯತೀಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕುರಿತು ಟೀಕೆ ಮಾಡಿದ್ದಾರೆ. ಹತಾಶ ಮನೋಭಾವ, ಬುದ್ಧಿಭ್ರಮಣೆ ಹಾಗೂ ಅಪ್ರಬುದ್ಧತೆಯಿಂದ ಅವರು ಮಾತನಾಡಿದ್ದಾರೆ. ಅವರ ಪ್ರಜ್ಞೆಯ ಮಟ್ಟ ಬಹಳ ಕಡಿಮೆ ಇದೆ ಎಂದರು.

ಗೃಹ ಸಚಿವರ ಬಗ್ಗೆ ನೀಡಿದ ಹೇಳಿಕೆ  ಸಂಬಂಧ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ವಿರುದ್ದ ಬಿಜೆಪಿ ನಾಯಕರು ಮುಗಿಬಿದ್ದಿದ್ದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮಾತನಾಡಿರುವ ವಿಪಕ್ಷ ನಾಯಕ ಆರ್.ಅಶೋಕ್, ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವರ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು. ಯತೀಂದ್ರ ಹೀಗೆಯೇ ಮಾತನಾಡುತ್ತಿದ್ದರೆ ರಾಹುಲ್‌ ಗಾಂಧಿಯಂತೆ ಜೈಲಿಗೆ ಹೋಗುವ ಸ್ಥಿತಿ ಬರಲಿದೆ ಎಂದು ಹೇಳಿದರು.

 

ಫ್ರೆಶ್ ನ್ಯೂಸ್

Latest Posts

Featured Videos