ಕಮಲ ಬಿಟ್ಟು ಕೈ ಸೇರಿದ ಮಾಜಿ ಸಚಿವ ಆರ್.ಶಂಕರ್

ಕಮಲ ಬಿಟ್ಟು ಕೈ ಸೇರಿದ ಮಾಜಿ ಸಚಿವ ಆರ್.ಶಂಕರ್

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆ ಕೆಲವೇ ದಿನಗಳು ಬಾಕಿ ಉಳಿದಿದ್ದು ರಾಜ್ಯದಲ್ಲಿ ಈ ಬಾರಿ ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಕಣಕ್ಕಿಳಿದಿದ್ದಾರೆ. ಮೈತ್ರಿ ಮಾಡಿಕೊಂಡಿರುವುದರಿಂದ ಬಿಜೆಪಿ ಹಾಗೂ ಜೆಡಿಎಸ್ ಅಭ್ಯರ್ಥಿಗಳಲ್ಲಿ ಮನಸ್ತಾಪ ಉಂಟಾಗಿ ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ

ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಮಾಜಿ ಸಚಿವ ಆರ್.ಶಂಕರ್ ಅವರು ಬಿಜೆಪಿ ಪಕ್ಷವನ್ನು ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಹೆಚ್.ಕೆ ಪಾಟೀಲ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಮಲ ಬಿಟ್ಟು, ಕೈ ಹಿಡಿದರು.

ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ರಾಣೇಬೆನ್ನೂರಿನ ಮಾಜಿ ಶಾಸಕರಾದ ಶ್ರೀ ಆರ್‌. ಶಂಕರ್‌ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ನಮ್ಮ ಪಕ್ಷದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್‌ ಸೇರ್ಪಡೆಗೊಂಡರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಮುಂದಿನ ರಾಜಕೀಯ ಜೀವನ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದೆ ಎಂದಿದ್ದಾರೆ. ಹೆಚ್ಚುತ್ತಿದೆ ಕಾಂಗ್ರೆಸ್‌ ಶಕ್ತಿ, ನಮ್ಮ ಕನಸು ರಾಜ್ಯದ ಪ್ರಗತಿ ಎಂದು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos