ಮನೆಯಲ್ಲಿ ಕೂತು ಕಾಮೆಂಟ್ ಮಾಡೋದಕ್ಕಿಂದ ಬಂದು ವೋಟ್ ಮಾಡಿ: ರಚಿತಾ

ಮನೆಯಲ್ಲಿ ಕೂತು ಕಾಮೆಂಟ್ ಮಾಡೋದಕ್ಕಿಂದ ಬಂದು ವೋಟ್ ಮಾಡಿ: ರಚಿತಾ

ಬೆಂಗಳೂರು: ಲೋಕಸಭೆ ಚುನಾವಣೆ 2024ರ ಮೊದಲನೇ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದೆ.

ಸಾಮಾನ್ಯ ಜನರಂತೆ ಸರತಿ ಸಾಲಿನಲ್ಲಿ ನಿಂತು ಸಿನಿ ತಾರೆಯರು ಮತದಾನ ಮಾಡುತ್ತಿದ್ದಾರೆ.  ಕನ್ನಡದ ಹೆಸರಾಂತ ನಟಿ ರಚಿತಾ ರಾಮ್ ಕತ್ರಿಗುಪ್ಪೆಯಲ್ಲಿ ಮತದಾನ ಮಾಡಿದರು. ಸಾಮಾನ್ಯರಂತೆ ಅರ್ಧ ಗಂಟೆಗೂ ಹೆಚ್ಚು ಕಾಲ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.

ಮತದಾನದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ರಚಿತಾ, ‘ಮನೆಯಲ್ಲಿ ಕೂತು ಕಾಮೆಂಟ್ ಮಾಡೋದಕ್ಕಿಂದ ಬಂದು ವೋಟ್ ಮಾಡಿ. ವೋಟ್ ಮಾಡದೇ ಬ್ಲೇಮ್ ಮಾಡಬೇಡಿ, ನಮ್ಮ ನಾಯಕರ ಆಯ್ಕೆ ಮಾಡಲೇಬೇಕು. ಬಿಸಿಲು ಅಂತ ಮನೆಯಲ್ಲಿ ಕೂರಬೇಡಿ, ಸಂಜೆವರೆಗೂ ಟೈಂ ಇದೆ ಬಂದು ವೋಟ್ ಮಾಡಿ. ಹಿರಿಯನಾಗರೀಕರೆ ಉತ್ಸಾಹದಿಂದ ವೋಟ್ ಮಾಡುವಾಗ ಯುವಕರು ಯಾಕೆ ಮನೆಯಲ್ಲಿ ಕೂರಬೇಕು’ ಎಂದು ಪ್ರಶ್ನೆ ಮಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos