ಸುಪ್ರೀಂ ಕೋರ್ಟಿನಲ್ಲಿ ರಾಹುಲ್ ಪೌರತ್ವ ಪ್ರಶ್ನಿಸಿದ್ದ ಅರ್ಜಿ ವಜಾ

ಸುಪ್ರೀಂ ಕೋರ್ಟಿನಲ್ಲಿ ರಾಹುಲ್ ಪೌರತ್ವ ಪ್ರಶ್ನಿಸಿದ್ದ ಅರ್ಜಿ ವಜಾ

ನವದೆಹಲಿ, ಮೇ.9, ನ್ಯೂಸ್ ಎಕ್ಸ್ ಪ್ರೆಸ್: ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ ಅವರ ಪೌರತ್ವ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್​ ವಜಾ ಮಾಡಿದೆ. ದೆಹಲಿಯ ಜೈ ಭಗವಾನ್ ಗೋಯೆಲ್​ ಹಾಗೂ ಚಂದರ್​ ಪ್ರಕಾಶ್​ ತ್ಯಾಗಿ ಎಂಬುವವರು ರಾಹುಲ್​ ಪೌರತ್ವ ಪ್ರಶ್ನಿಸಿ ಸುಪ್ರೀಂಕೋರ್ಟ್​ ಮೆಟ್ಟಿಲು ಹತ್ತಿದ್ದರು. ರಾಹುಲ್ ಬ್ರಿಟಿಷ್​ ಪ್ರಜೆಯೇ ಎಂಬುದನ್ನು ಪರಿಶೀಲಿಸುವಂತೆ ಸರ್ಕಾರಕ್ಕೆ ಆದೇಶಿಸಬೇಕು. ಆ ಮೂಲಕ ಅವರು ಚುನಾವಣೆಗೆ ಸ್ಪರ್ಧಿಸಲು, ಸಂಸತ್ತಿನ ಸ್ಥಾನ ಪಡೆಯಲು ಅರ್ಹರೇ ಎಂಬುದನ್ನು ನಿರ್ಧರಿಸಬೇಕು ಎಂದು ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ನ ಮುಖ್ಯನ್ಯಾಯಮೂರ್ತಿ ರಂಜನ್​ ಗೊಗೊಯಿ ನೇತೃತ್ವದ ಪೀಠ, ಯಾವುದೋ ಕಂಪನಿ ರಾಹುಲ್​ರನ್ನು ಬ್ರಿಟಿಷ್​ ಎಂದ ಮಾತ್ರಕ್ಕೆ ಅವರು ಬ್ರಿಟನ್​ ಪ್ರಜೆಯಾಗಿಬಿಡುತ್ತಾರೆಯೇ ಎಂದು ಪ್ರಶ್ನಿಸಿದೆ. ಮಾಜಿ ಬಿಎಸ್​ಎಫ್​ ಯೋಧ ತೇಜ್​ ಬಹದ್ದೂರ್​ ಯಾದವ್​ ವಾರಣಾಸಿ ಕ್ಷೇತ್ರಕ್ಕೆ ಸಲ್ಲಿಸಿದ್ದ ನಾಮಪತ್ರವನ್ನು ಚುನಾವಣಾ ಆಯೋಗ ರದ್ದು ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ವಜಾ ಮಾಡಿದೆ. ಈ ಅರ್ಜಿಯನ್ನು ಪರಿಗಣಿಸಲಾಗದು ಎಂದು ಸಿಜೆಐ ಗೊಗೊಯಿ ಅಭಿಪ್ರಾಯಪಟ್ಟರು.

ಫ್ರೆಶ್ ನ್ಯೂಸ್

Latest Posts

Featured Videos