ರಾಹುಲ್ ದಾಖಲೆ ಮುರಿದ ರೋಹಿತ್

ರಾಹುಲ್ ದಾಖಲೆ ಮುರಿದ ರೋಹಿತ್

ವಿಶಾಖಪಟ್ಟಣ, ಅ. 5 : ಟೆಸ್ಟ್ ಆರಂಭಿಕನಾಗಿ ಕಣಕ್ಕಿಳಿದ ಮೊದಲ ಪಂದ್ಯದಲ್ಲೇ ಶತಕ ಹಾಗೂ ಅರ್ಧಶತಕ ಸಾಧನೆ ಮಾಡಿರುವ ರೋಹಿತ್ ಶರ್ಮಾ ಅನೇಕ ದಾಖಲೆಗಳನ್ನು ಪುಡಿಗಟ್ಟಿದ್ದಾರೆ.
ವಿಶಾಖಪಟ್ಟಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ನಾಲ್ನನೇ ದಿನದಾಟದಲ್ಲೂ ತನ್ನ ಎರಡನೇ ಇನ್ನಿಂಗ್ಸ್ನಲ್ಲೂ ರೋಹಿತ್ ಆಕರ್ಷಕ ಅರ್ಧಶತಕ ಸಾಧನೆ ಮಾಡಿದರು.
ಈ ಮೂಲಕ ಭಾರತದ ಮಾಜಿ ದಿಗ್ಗಜ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ದಾಖಲೆ ಮುರಿದಿದ್ದಾರೆ. ಅಲ್ಲದೆ ತವರು ನೆಲದಲ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಸತತ ಏಳು ಇನ್ನಿಂಗ್ಸ್ಗಳಲ್ಲಿ 50 ಅಥವಾ ಅದಕ್ಕಿಂತಲೂ ಹೆಚ್ಚು ರನ್ ಗಳಿಸಿದ ಕೀರ್ತಿಗೆ ಭಾಜನವಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos