ರಾಹುಲ್‌ ದ್ರಾವಿಡ್‌ ಗೆ ಹುಟ್ಟು ಹಬ್ಬದ ಸಂಭ್ರಮ.

ರಾಹುಲ್‌ ದ್ರಾವಿಡ್‌ ಗೆ ಹುಟ್ಟು ಹಬ್ಬದ ಸಂಭ್ರಮ.

ಬೆಂಗಳೂರು: ಭಾರತ ಕ್ರಿಕೆಟ್ ಕಂಡ ಅತ್ಯಂತ ಸಭ್ಯ ಕ್ರಿಕೆಟಿಗ, ಟೀಮ್ ಇಂಡಿಯಾ ಮುಖ್ಯ ಕೋಚ್ ಆಗಿರುವ ದಿ ವಾಲ್ ಖ್ಯಾತಿಯ ರಾಹುಲ್ ದ್ರಾವಿಡ್ ಇಂದು ತಮ್ಮ 51ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ರಾಹುಲ್ ದ್ರಾವಿಡ್, ತಮ್ಮ ಕ್ರಿಕೆಟ್ ಕರಿಯರ್​​ನಲ್ಲಿ ಹಲವು ಮಜಲುಗಳನ್ನು ತಲುಪಿದ್ದಾರೆ. ಅನೇಕ ದಾಖಲೆ, ಸಾಧನೆಗಳನ್ನೂ ಮಾಡಿದ್ದಾರೆ. ರಾಹುಲ್ ದ್ರಾವಿಡ್ ಟೆಸ್ಟ್​ ಕ್ರಿಕೆಟ್​​ನಲ್ಲಿ 11 ಬಾರಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ವಿದೇಶಿ ನೆಲದಲ್ಲಿ 8 ಟೆಸ್ಟ್ ಸರಣಿಗಳನ್ನು ಗೆದ್ದಿದ್ದಾರೆ.

ಸತತ 4 ಇನ್ನಿಂಗ್ಸ್‌ಗಳಲ್ಲಿ ಶತಕ ಸಿಡಿಸಿದ ಏಕೈಕ ಭಾರತೀಯ ಆಟಗಾರ ಎಂಬ ದಾಖಲೆಯನ್ನು ದ್ರಾವಿಡ್ ಹೊಂದಿದ್ದಾರೆ. ಎಲ್ಲಾ ಟೆಸ್ಟ್ ತಂಡಗಳ ವಿರುದ್ಧ ಶತಕ ಬಾರಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos