ನಾಮಪತ್ರ ಸಲ್ಲಿಸಿದ ರಾಹುಲ್​ ಗಾಂಧಿ

ನಾಮಪತ್ರ ಸಲ್ಲಿಸಿದ ರಾಹುಲ್​ ಗಾಂಧಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ನ ನಾಯಕ ರಾಹುಲ್ ಗಾಂಧಿಯವರು ಎಂದು ಈ ಬಾರಿ ಲೋಕಸಭಾ ಚುನಾವಣೆಗೆ ತಮ್ಮ ನಾಮಪತ್ರವನ್ನು ಸಲ್ಲಿಸಿದ್ದಾರೆ. ಇನ್ನು ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ರಾಹುಲ್ ಗಾಂಧಿಯವರು ಈ ಬಾರಿ ರಾಯ್​ಬರೇಲಿಯಿಂದ ಕಣಕ್ಕಿಳಿದ್ದಾರೆ.

ಬಿಜೆಪಿ ಪಕ್ಷದಿಂದ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಕಣಕ್ಕಿಳಿಸಿದೆ. ಕೆಎಲ್ ಶರ್ಮಾ ಕೂಡ ಅಮೇಥಿಯಿಂದ ನಾಮಪತ್ರ ಸಲ್ಲಿಸಿದ್ದಾರೆ. ಅಮೇಥಿಯಿಂದ ನಾಮಪತ್ರ ಸಲ್ಲಿಸಿದ ನಂತರ ಶರ್ಮಾ, ಚುನಾವಣೆ ಕೇವಲ ಔಪಚಾರಿಕತೆಯಾಗಿದೆ ಮತ್ತು ಜನರು ತಮ್ಮ ಪರವಾಗಿ ಕೆಲಸ ಮಾಡುವವರನ್ನು ನಿರ್ಧರಿಸುತ್ತಾರೆ ಎಂದು ಹೇಳಿದರು. ಇಲ್ಲಿಂದ ಯಾರು ಗೆಲ್ಲುತ್ತಾರೆ ಅಥವಾ ಸೋಲುತ್ತಾರೆ, ಅದು ಜನರ ಕೈಯಲ್ಲಿದೆ, ನಾವು ಕಷ್ಟಪಟ್ಟು ಕೆಲಸ ಮಾಡುತ್ತೇವೆ ಎಂದರು.

ಪ್ರಿಯಾಂಕಾ ಗಾಂಧಿ ಅವರು ಅಮೇಥಿ ಅಥವಾ ರಾಯ್ ಬರೇಲಿಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ಆದರೆ, 25 ವರ್ಷಗಳಲ್ಲಿ ಗಾಂಧಿಯೇತರ ಅಭ್ಯರ್ಥಿ ಅಮೇಥಿಯಿಂದ ಸ್ಪರ್ಧಿಸುತ್ತಿರುವುದು ಇದೇ ಮೊದಲು. 1967 ರಲ್ಲಿ ಲೋಕಸಭಾ ಕ್ಷೇತ್ರವಾಗಿ ರಚನೆಯಾದಾಗಿನಿಂದ, ಅಮೇಥಿ ಸುಮಾರು 31 ವರ್ಷಗಳ ಕಾಲ ಗಾಂಧಿ ಕುಟುಂಬದಿಂದ ಪ್ರತಿನಿಧಿಸಲ್ಪಟ್ಟಿದೆ. 2019 ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ಅವರು ರಾಹುಲ್ ಗಾಂಧಿಯನ್ನು 55,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿದಾಗ ಕಾಂಗ್ರೆಸ್ ಭದ್ರಕೋಟೆ ಬದಲಾವಣೆ ಕಂಡಿತ್ತು.

ಸಂದರ್ಭದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ರಾಬರ್ಟ್ ವಾದ್ರಾ ಉಪಸ್ಥಿತರಿದ್ದರು. ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾಗಾಂಧಿ ಕೂಡ ಉಪಸ್ಥಿತರಿದ್ದರು.

 

ಫ್ರೆಶ್ ನ್ಯೂಸ್

Latest Posts

Featured Videos