ರಾಹುಲ್ ಸುಪ್ರೀಂಗೆ ಕ್ಷಮೆ.!

ರಾಹುಲ್ ಸುಪ್ರೀಂಗೆ ಕ್ಷಮೆ.!

ನವದೆಹಲಿ, ಮೇ.9, ನ್ಯೂಸ್ ಎಕ್ಸ್ ಪ್ರೆಸ್: ಚೌಕಿದಾರ್ ಚೋರ್ ಹೈ ಎಂಬ ಹೇಳಿಕೆಗೆ ಸುಪ್ರೀಂ ಕೋರ್ಟ್ ಮುಂದೆ  ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಕೋರಿದ್ದಾರೆ.

ರಫೇಲ್ ಯುದ್ಧ ವಿಮಾನದ ದಾಖಲೆಗಳ ಬಗ್ಗೆ ಸುಪ್ರೀಂಕೋರ್ಟ್‌ ಏ.10ರಂದು ನೀಡಿದ್ದ ತೀರ್ಪನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ಚೌಕಿದಾರ್‌ ಚೋರ್‌ ಹೈ’ಎಂಬ ಹೇಳಿಕೆ ಬಗ್ಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್ ಗಾಂಧಿ ಬೇಷರತ್‌ ಕ್ಷಮೆ ಯಾಚಿಸಿದ್ದಾರೆ.

ಬಿಜೆಪಿ ಸಂಸದೆ, ನ್ಯಾಯವಾದಿ ಮೀನಾಕ್ಷಿ ಲೇಖಿ ಸಲ್ಲಿಸಿದ್ದ ದೂರಿನ ಆಧಾರದಲ್ಲಿ ದಾಖಲಾಗಿರುವ ಕ್ರಿಮಿನಲ್ ಮೊಕದ್ದಮೆಯನ್ನೂ ರದ್ದು ಮಾಡಬೇಕು ಎಂದು ಬುಧವಾರ ಸಲ್ಲಿಸಿರುವ ಹೆಚ್ಚುವರಿ ಅಫಿಡವಿಟ್‌ನಲ್ಲಿ ರಾಹುಲ್  ಅರಿಕೆ ಮಾಡಿಕೊಂಡಿದ್ದಾರೆ. ಇದೇ ವೇಳೆ ಲೇಖಿ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿ ಮತ್ತು ರಫೇಲ್ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ಮೇ 10ರಂದು ವಿಚಾರಣೆಗೆ ಬರಲಿದೆ. ಸುಪ್ರೀಂಕೋರ್ಟ್‌ಗೆ ರಾಹುಲ್ ಗಾಂಧಿ ಸಲ್ಲಿಸಿರುವ ಬೇಷರತ್‌ ಕ್ಷಮೆ ಕಾಂಗ್ರೆಸ್‌ ರಾಜಕೀಯವಾಗಿ ದಿವಾಳಿಯಾಗಿದೆ ಎಂಬುದನ್ನು ತೋರಿಸುತ್ತದೆ ಎಂದು ಕೇಂದ್ರ ಸಚಿವ ರವಿಶಂಕರ್‌ ಪ್ರಸಾದ್‌ ವ್ಯಂಗ್ಯವಾಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos