ವಯನಾಡ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ವಯನಾಡ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

ವಯನಾಡ್, ಏ. 5, ನ್ಯೂಸ್ ಎಕ್ಸ್ ಪ್ರೆಸ್: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮುಂಬರುವ ಲೋಕಸಭೆ ಚುನಾವಣೆಗೆ ಕೇರಳದ ವಯನಾಡ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದಾರೆ.ಅಮೇಥಿ ಕ್ಷೇತ್ರದ ಜೊತೆಗೆ ವಯನಾಡ್ ನಲ್ಲಿಯೂ ಸ್ಪರ್ಧಿಸುತ್ತಿರುವ ರಾಹುಲ್ ಇಂದು ಜಿಲ್ಲಾಧಿಕಾರಿ ಜಿ.ಆರ್.ಅಜಯಕುಮಾರ್ ಅವರಿಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸುವ ವೇಳೆ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ಮುಖಂಡರಾದ ಕೆ.ಸಿ.ವೇಣುಗೋಪಾಲ್ ಮತ್ತು ಮುಕುಲ್ ವಾಸ್ನಿಕ್  ಕೂಡ ಸಾಥ್ ನೀಡಿದ್ದಾರೆ.ಇದಕ್ಕೂ ಮೊದಲು ರಾಹುಲ್ ಗಾಂಧಿ ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಮತ್ತು ಕೇರಳ ವಿಧಾನಸಭಾ ವಿರೋಧ ಪಕ್ಷದ ಮುಖಂಡ ರಮೇಶ್ ಚೆನ್ನಿತಾಳರ ಜೊತೆಗೂಡಿ ರೋಡ್ ಶೋ ನಡೆಸಿದರು. ಕ್ಯಾಲಿಕಟ್ ನಿಂದ ವಯನಾಡ್ ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಯವರನ್ನು ಕಾರ್ಯಕರ್ತರು ಸ್ವಾಗತಿಸಿ ನಂತರ ರೋಡ್ ಶೋ ನಲ್ಲಿ ಭಾಗವಹಿಸಿದರು.ಇನ್ನೊಂದೆಡೆಗೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕರು  ಈಗ ವಯನಾಡ್ ಕ್ಷೇತ್ರದಿಂದ ಅವರು ಸ್ಪರ್ಧಿಸುವ ಮೂಲ ಅಮೇಥಿ ಜನರಿಗೆ ಅವರು ಅವಮಾನ ಮಾಡಿದ್ದಾರೆ ಎಂದು ಎಂದು ಕಿಡಿ ಕಾರಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos