ರಾಯಚೂರು ಲೋಕಸಭಾ ಕ್ಷೇತ್ರ: ಕೈ ಅಭ್ಯರ್ಥಿ ಸಂಸದ ಬಿ.ವಿ.ನಾಯಕ್ ನಾಮಪತ್ರ ಸಲ್ಲಿಕೆ

ರಾಯಚೂರು ಲೋಕಸಭಾ ಕ್ಷೇತ್ರ: ಕೈ ಅಭ್ಯರ್ಥಿ ಸಂಸದ ಬಿ.ವಿ.ನಾಯಕ್ ನಾಮಪತ್ರ ಸಲ್ಲಿಕೆ

ರಾಯಚೂರು, ಮಾ.29, ನ್ಯೂಸ್ ಎಕ್ಸ್ ಪ್ರೆಸ್: ರಾಯಚೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಸಂಸದ ಬಿ.ವಿ.ನಾಯಕ್ ಅವರು ಅವರ ಅಪಾರ ಕಾರ್ಯಕರ್ತರು, ಹಾಗೂ ಪ್ರಮುಖ ಮುಖಂಡರ ಸಮ್ಮುಖದಲ್ಲಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದರು.
ಇಂದು ನಗರದಲ್ಲಿ ಸಾವಿರಾರು ಕಾರ್ಯಕರ್ತರು, ಬೆಂಬಲಿಗರು, ಪಕ್ಷದ ಪ್ರಮುಖ ಮುಖಂಡರ ಸಮ್ಮುಖದಲ್ಲಿ ಮೆರವಣಿಗೆ ಮೂಲಕ ಹೊರಡು ಜಿಲ್ಲಾಧಿಕಾರಿಗೆ ನಾಮಪತ್ರ್ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಡಿ.ಎಸ್.ಹುಲಿಗೇರಿ, ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸುರಾಜ್, ಶಹಾಪುರ ಶಾಸಕ ಶರಣಬಸಪ್ಪ ದರ್ಶನಾಪುರ, ಮಾನ್ವಿ ಶಾಸಕ ರಾಜಾ ವೆಂಕಟಪ್ಪ ನಾಯಕ, ಮಾಂತೇಶ್ ಪಾಟೀಲ್, ಕಾಂಗ್ರೆಸ್ ಮುಖಂಡರಾದ ಪರುಶುರಾಮ್ ನಗನೂರು, ರಾಮಣ್ಣ ಇರಿಬಗೇರ್, ಭೂಪನಗೌಡ ಪಾಟೀಲ್ ಕಡಕಲ್, ವಿರುಪಾಕ್ಷಪ್ಪ, ಗುಂಡಪ್ಪ ನಾಯಕ್, ಗುಂಡಪ್ಪ ಸಾಹುಕಾರ್ ಸೇರಿದಂತೆ ಜಿಲ್ಲೆಯ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos