ರಾಯಚೂರು ವಿಶ್ವವಿದ್ಯಾಲಯ ಅನುಷ್ಠಾನ

ರಾಯಚೂರು ವಿಶ್ವವಿದ್ಯಾಲಯ ಅನುಷ್ಠಾನ

ರಾಯಚೂರು, ಫೆ. 25: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ರಾಯಚೂರು ವಿಶ್ವವಿದ್ಯಾಲಯದ ಅನುಷ್ಠಾನ ಮಾಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ, ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀನೋಪಾಯ ಇಲಾಖೆ, ಐಟಿ ಮತ್ತು ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್ ಹೇಳಿದರು.

ರಾಯಚೂರು ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ವಿಭಾಗೀಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ಹಲವಾರು ವರ್ಷಗಳಿಂದ ಜಿಲ್ಲೆಯಲ್ಲಿ ವಿಶ್ವವಿದ್ಯಾಲಯದ ಸ್ಥಾಪನೆಗೆ ಹಲವು ಪ್ರಸ್ತಾವನೆಗಳನ್ನು ಸಲ್ಲಿಸಲಾಗುತ್ತಿದ್ದು, ಕಾರಣಾಂತರಗಳಿಂದ ಬೇಡಿಕೆಯನ್ನು ನಿರಾಕರಿಸಲಾಗಿತ್ತು. ಈ ನಿಟ್ಟಿನಲ್ಲಿ ಈಗಾಗಲೇ ವಿಧಾನಸೌಧದಲ್ಲಿ ಈ ಕುರಿತು ವಿಷಯವನ್ನು ಮಂಡಿಸಿ ಒಪ್ಪಿಗೆ ಪಡೆಯಲಾಗಿದೆ ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯಾಬೇಕಾದರೆ ಅದು ಪ್ರಥಮವಾಗಿ ಮಕ್ಕಳ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಮಹತ್ತರ ಬದಲಾವಣೆ ಆಗಬೇಕಿದೆ. “ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗಿತೇ “ಎಂಬ ಗಾದೆಯಂತೆ ಮಕ್ಕಳ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ಉತ್ತಮ ಬೀಜ ಬಿತ್ತಿದರೆ ಮುಂದಿನ ದಿನಮಾನಗಳಲ್ಲಿ ಉತ್ತಮ ಬೇರು ಬಿಡಲು ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಅದ್ಯತೆ ನೀಡಬೇಕು ಎಂದರು.

ವಿಶ್ವವಿದ್ಯಾಲಯ ಸ್ಥಾಪನೆಯಾದರೆ ಹಿಂದುಳಿದ ಜಿಲ್ಲೆಗಳ ಶೈಕ್ಷಣಿಕ ಅಭಿವೃದ್ಧಿಗೆ ಅನುಕೂಲವಾಗುತ್ತದೆ ಎಂದು ವಿಶ್ವವಿದ್ಯಾಯದ ವಿಶೇಷ ಅಧಿಕಾರಿ ಮುಜಾಫರ್ ಅಸಾಧಿ ಹೇಳಿದರು.

ರಾಯಚೂರು ವಿಶ್ವವಿದ್ಯಾಲಯ ನಿರ್ಮಾಣದ ಬಗ್ಗೆ 2016 ರಲ್ಲಿ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರಸ್ತಾಪಸಲಾಗಿತ್ತು. ವಿಶ್ವವಿದ್ಯಾಲಯ ನಿರ್ಮಾಣವಾದರೆ ಮಹತ್ವಕಾಂಕ್ಷಿ ಜಿಲ್ಲೆಗಳ ಅಭಿವೃದ್ಧಿಗೆ ಪೂರಕವಾಗುತ್ತದೆ. ಜಿಲ್ಲೆಯ ಹಲವು ಖಾಸಗಿ ಕಾಲೇಜುಗಳು ಇದರ ವ್ಯಾಪ್ತಿಯಲ್ಲಿ ಬರುತ್ತವೆ. ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಅನುಕೂಲವಾಗುತ್ತದೆ ಎಂದರು.

ಭವಿಷ್ಯದ ಆಧಾರದ ಮೇಲೆ 300 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಬೇಕಾಗಿದೆ. ವಿಶ್ವವಿದ್ಯಾಲಯಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳು ಒದಗಿಸಬೇಕೆಂದು ಸರ್ಕಾರಕ್ಕೆ ಬೇಡಿಕೆ ನೀಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ, ಶಾಸಕ ಡಾ. ಶಿವರಾಜ ಪಾಟೀಲ್, ಜಿಲ್ಲಾ ಪಂಚಾಯತ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್, ಸಹಾಯಕ ಆಯುಕ್ತ ಸಂತೋಷ ಕಾಮಗೌಡ, ಜಿಲ್ಲಾಪಂಚಾಯತ ಸಿಇಓ ಲಕ್ಷ್ಮೀಕಾಂತ ರೆಡ್ಡಿ ಜಿ,ವಿಶ್ವವಿದ್ಯಾಲಯದ ಕುಲಪತಿಗಳು, ವಿವಿಧ ವಿಭಾಗಗಳ ಅಧಿಕಾರಿಗಳು, ಶಿಕ್ಷಣ ಸಂಸ್ಥೆಯ ಸಿಬ್ಬಂದಿ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos